ಯಾದಗಿರಿ/ವಡಗೇರಾ:ರೈತರು ಖರೀದಿಸಿದ ಕೃಷಿ ಸಾಮಗ್ರಿಗಳಿಗೆ ಕಡ್ಡಾಯವಾಗಿ ರಶೀದಿ ನೀಡಬೇಕು ಹಾಗೂ ರಸೀದಿಯ ಮೇಲೆ ಸಂಬಂಧಪಟ್ಟ ರೈತರ ಸಹಿ ಪಡೆಯಬೇಕೆಂದು ಕೃಷಿ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್ ಕೃಷಿ ಪರಿಕರ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದರು.
ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ತಾಲೂಕಿನ ಕೃಷಿ ಪರಿಕರ (ರಸಗೊಬ್ಬರ,ಬೀಜ,ಕೀಟನಾಶಕ) ಮಾರಾಟಗಾರರ ಮುಂಗಾರು 2024ರ ಮುಂಗಾರು ಹಂಗಾಮು ಪೂರ್ವ ಸಭೆ ಹಾಗೂ ಕೃಷಿ ಪರಿಕರ ವಿತರಕರು ಮಾರಾಟಗಾರರಿಗೆ ಹಮ್ಮಿಕೊಂಡ ಗುಣ ನಿಯಂತ್ರಣ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ಮಾರಾಟಗಾರರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು,ಬಿಲ್ ನೀಡದೇ ಇರುವುದು,ಅವಧಿ ಮೀರಿದ ಕೃಷಿ ಪರಿಕರಗಳನ್ನು ವಿತರಣೆ ಮಾಡುವುದು ಅಥವಾ ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಮಾರಾಟಗಾರರ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಯಾವುದೆ ಕಾರಣಕ್ಕೂ ಅವಧಿ ಮುಗಿದ ಕೀಟನಾಶಕಗಳನ್ನು ಮಾರಾಟ ಮಾಡಬಾರದು ಹಾಗೂ ರಸಗೊಬ್ಬರ ಅಂಗಡಿಗಳಲ್ಲಿ ರಸಗೊಬ್ಬರ ಬಿಟ್ಟರೆ ಬೇರೆ ಯಾವುದೇ ಸಾಮಾಗ್ರಿಗಳನ್ನು ಮಾರಾಟ ಮಾಡಬಾರದು ಮತ್ತು ಸ್ವಚ್ಚತೆಯನ್ನು ಕಾಪಾಡಿಕೊಳ್ಳಿ, ರೈತರಿಗೆ ಬಿತ್ತನೆ ಬೀಜ ಹಾಗೂ ಕಳಫೆ ರಸಗೊಬ್ಬರಗಳನ್ನು ವಿತರಣೆ ಮಾಡಬಾರದು ಅಂತಹ ಮಾರಾಟಗಾರರು ಕಂಡು ಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾರಾಟಗಾರರು ಯಾವುದೇ ಪರಿಕರಗಳನ್ನು ವಿತರಣೆ ಮಾಡುವಾಗ ಕಡ್ಡಾಯವಾಗಿ ಪಾಯಿಂಟ್ ಆಫ್ ಸೇಲ್ ಯಂತ್ರದ ಮೂಲಕ ಮಾರಾಟ ಮಾಡಬೇಕು,ಸ್ಟಾಕ್ ಬುಕ್ ದರಪಟ್ಟಿ ಬರೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ,ಕೃಷಿ ಪರಿಕರ ಮಾರಾಟಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಪರ್ವತರೆಡ್ಡಿಗೌಡ ಬೆಂಡೆಬೆಂಬಳಿ,ಗೌರವ ಅಧ್ಯಕ್ಷ ಬಸವರಾಜ ಸಾಹು ಸುಂಕೇಸರಾಳ,ಕೃಷಿ ಸಿಬ್ಬಂದಿ ರಾಜಶೇಖರ್ ಪಾಟೀಲ್ ಹಾಗೂ ತಾಲೂಕಿನ ಎಲ್ಲಾ ಕೃಷಿ ಪರಿಕರ ವಿತರಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.