ರಾಯಚೂರು:ನಿನ್ನೆ ಪತ್ರಿಕಾ ಹೇಳಿಕೆ ನೀಡಿದ ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಇರುವುದು ಬಡವರ ಕಲ್ಯಾಣಕ್ಕೆ ವಾಲ್ಮೀಕಿ ನಾಯಕ ಸಮುದಾಯದ ಜನರ ಅಭಿವೃದ್ಧಿಗೆ ಆದರೆ ಈ ನಿಗಮದಲ್ಲಿ ಬಡವರ ಕಲ್ಯಾಣಕ್ಕೆ ಸಿಗುವ ನೂರಾರು ಕೋಟಿ ಅನುದಾನದ ಹಣವನ್ನು ಭ್ರಷ್ಟ ಅಧಿಕಾರಿಗಳು ಭ್ರಷ್ಟ ಕೆಲವು ರಾಜಕಾರಣಿಗಳ ಜೊತೆ ಸೇರಿ ಹಣವನ್ನು ಲೂಟಿ ಹೊಡೆದು ವಾಲ್ಮೀಕಿ ನಾಯಕ ಸಮುದಾಯದ ಜನರಿಗೆ ಅನ್ಯಾಯ ಮಾಡುತ್ತಿರುವುದು ನಾಚಿಕೆಗೇಡಿನ ಕೆಲಸ.ಇದು ಖಂಡನೀಯ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಚಂದ್ರಶೇಖರ್ ರವರಿಗೆ ಎಲ್ಲಾ ಮಾಹಿತಿ ಗೊತ್ತಿದ್ದರೂ ಮೌನವಾಗಿ ಉಳಿದು ಕೊನೆಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಹೇಡಿತನದ ಕೆಲಸ ಮಾಡಿದ್ದಾರೆ.ಒಂದು ರೀತಿಯಲ್ಲಿ ಇವರದ್ದು ಕೂಡ ತಪ್ಪು ಇದೆ.ಹಾಗೆಯೇ ಇವರಿಗೆ ಭ್ರಷ್ಟಾಚಾರದಲ್ಲಿ ಸಿಲುಕಿಸಿ ಇವರ ಸಾವಿಗೆ ಕಾರಣರಾದ ಅಧಿಕಾರಿಗಳು ರಾಜಕಾರಣಿಗಳ ಮೇಲೆಯೂ ಕ್ರಮ ಜರುಗಿಸಬೇಕು.
ಈ ಒಂದು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಯಾರೆ ದೊಡ್ಡ ರಾಜಕಾರಣಿ ಭಾಗಿ ಆಗಿರಲಿ ಅವರ ಮೇಲೆ ಕಾನೂನು ಕ್ರಮ ಕೈಗೊಂಡು ತಪ್ಪು ಸಾಬೀತಾದಲ್ಲಿ ಅವರ ಮೇಲೆ ಶಿಸ್ತು ಕ್ರಮ ಜರುಗಿಸಿ ಕಾನೂನು ಕಠಿಣ ಶಿಕ್ಷೆ ವಿಧಿಸಲಿ ಹಾಗೂ ಪಕ್ಷದ ಮುಖ್ಯ ಮುಖಂಡರು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಿ ಯಾವುದೇ ಸರ್ಕಾರ ಇರಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಅನ್ಯಾಯ ಮೋಸ ಮಲತಾಯಿ ಧೋರಣೆ ಮಾಡುತ್ತಾ ಬರುತ್ತಿವೆ ಎಂದು ತಿಳಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.