ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಾತ್ರಿಕಯ್ಯನಹಟ್ಟಿ ಗ್ರಾಮದಲ್ಲಿ ಶಾಲೆ ಬಾಲಕಿಯೊರ್ವಳು ಶಾಲೆಯಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿರುವ ದುರ್ಘಟನೆ ಜರುಗಿದೆ.ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ತುಳಸಿ (8),ತನ್ನ ತಾಯಿಯ ಕೈತುತ್ತು ತಿಂದು ಖುಷಿ..ಖುಷಿಯಿಂದ. ಶಾಲೆಯ ಬ್ಯಾಗ್ ನ್ನು ಹೆಗಲಿಗೇರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು,ಆದರೆ ವಿದ್ಯುತ್ ತಗುಲಿ ಕ್ರೂರ ವಿಧಿಗೆ ಬಾಲಕಿ ಉಸಿರು ಚೆಲ್ಲಿದ್ದಾಳೆ.ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ, ವಿದ್ಯುತ್ ಸ್ಪರ್ಶಿಸಿ (Electric shock) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.
ಬಾಲಕಿ ತುಳಸಿ ಕರೆಂಟ್ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ದುಖಃ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿದೆ.ಘಟನಾ ಸ್ಥಳಕ್ಕೆ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಲಾಗಿದೆ.ಮೃತ ಶಾಲಾ ಬಾಲಕಿಯ ಕುಟುಂಬ ರೋಧನ ಮುಗಿಲು ಮುಟ್ಟಿದ್ದು ಗ್ರಾಮದಲ್ಲಿ ಸೂತಕದ ವಾತವರಣ ಆವರಿಸಿದೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.