ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಒಟ್ಟು 6 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಭೂಮಿ ಸಮಸ್ಯೆ ಎದುರಾಗಿರುವ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಕಟವಾಗಿತ್ತು.
ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

ಅದರನ್ವಯ ಈಗಾಗಲೇ ಸ್ವಚ್ಛ ಭಾರತ್‌ ಮಿಷನ್‌ ಮತ್ತು ನರೇಗಾ ಯೋಜನೆಯಡಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಕಳಸ ಮತ್ತು ಇಣಕಣಿ ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ನಿರ್ವಹಣೆ ಆಗುತ್ತಿದೆ.ಉಳಿದ ನಾಲ್ಕು ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಪ್ರಾರಂಭಗೊಂಡು ಪ್ರಗತಿಯಲ್ಲಿದೆ. ತ್ಯಾಜ್ಯ ನಿರ್ವಹಣಾ ಘಟಕಗಳ ಮೂಲಕ ಸಮರ್ಪಕವಾಗಿ ಕಸ ವಿಲೇವಾರಿ ಮತ್ತು ನಿರ್ವಹಣೆಯನ್ನು ಮಾಡಲು ಸೂಚನೆ ನೀಡಲಾಗಿದೆ.

ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ
@osd_cmkarnataka `ಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ