ಕಲಬುರಗಿ:ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಮಲಾಪೂರ ತಾಲೂಕಿನಲ್ಲಿ ಹಮ್ಮಿಕೊಂಡ ಬಿಜೆಪಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ಪಕ್ಷಕ್ಕಿಂತ ಕಾಂಗ್ರೆಸ್ ಅಭ್ಯರ್ಥಿ 10 ಮತಗಳು ಹೆಚ್ಚಾಗಿ ಪಡೆದರೆ ರಾಜೀನಾಮೆ ನೀಡಿರುವುದಾಗಿ ಹೇಳಿರುತ್ತಾರೆ.
ಅದಕ್ಕೆ ಬದ್ದವಾಗಿ ಇದೇ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಹೇಳಿಕೆ ನೀಡಿ ಮೋದಿ ಮತ್ತೊಮೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿಕೆ ನೀಡಿರುತ್ತಾರೆ,ಆದರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳುವ ಮುಂಚೆ ಸಿಎಂ ಸಿದ್ದರಾಮಯ್ಯ ಅವರನ್ನು ದೇಶ ಬಿಟ್ಟು ಹೋಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಲಿ ಎಂದು ಕನ್ನಡಪರ ಹೋರಾಟಗಾರ ಆನಂದ ತೆಗನೂರ ಸವಾಲು ಹಾಕಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳವುದು ಎಷ್ಟರ ಮಟ್ಟಿಗೆ ಸರಿ? ಎಂದು ಅವರು ಪ್ರಶ್ನಿಸಿದರು.ಏಕೆಂದರೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಹೇಳಿಕೆ ನೀಡುವುದು ಸಾಮಾನ್ಯವಾಗಿರುತ್ತವೆ.ಆದರೆ ಸಿಎಂ ಸಿದ್ಧರಾಮಯ್ಯ ಅವರು ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆದರೆ ನಾನು ದೇಶ ಬಿಟ್ಟು ಓಡಿ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.ಆದರೆ ಕಲಬುರಗಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ದೇಶದಿಂದ ಕಳುಹಿಸದೆ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕೂಡಲೇ ಮೊದಲು ತಮ್ಮ ಪಕ್ಷದ ಸಿಎಂ ಸಿದ್ದರಾಮಯ್ಯ ಅವರನ್ನು ದೇಶ ಬಿಟ್ಟು ಮೊದಲು ಕಳುಹಿಸಲಿ ನಂತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಾಸಕ ಬಸವರಾಜ ಮತ್ತಿಮಡು ಅವರ ರಾಜೀನಾಮೆ ಕೇಳುವುದು ಸೂಕ್ತ ಎಂದು ಅವರು ಹೇಳಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.