ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಮಾಡಲಾಯಿತು.
ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಪ್ರತಿವರ್ಷ ಜೂನ್ 12ನೇ ತಾರೀಖಿನ ದಿನವನ್ನು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಎಂದು 2002 ರಲ್ಲಿ ಘೋಷಣೆ ಮಾಡಿರುತ್ತದೆ ಹಾಗೂ ವಿಶ್ವಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ 12ನೇ ತಾರೀಕಿನ ದಿನವನ್ನು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸುತ್ತಾ ಬಂದಿರುತ್ತವೆ.
ನಾವೆಲ್ಲರೂ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆ ಬಯಸುವುದಿಲ್ಲವೆಂದು ಪ್ರಮಾಣ ವಚನವನ್ನು ಶಾಖಾ ಗ್ರಂಥಾಲಯ ಅಧಿಕಾರಿ ಮಲ್ಲಪ್ಪ ಗುಡ್ಲಾನೂರ್ ಬೋಧಿಸಿದರು.
ಈ ಸಂದರ್ಭದಲ್ಲಿ ಗ್ರಂಥಾಲಯ ಸದಸ್ಯರು,ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು, ಸಾರ್ವಜನಿಕರು,ಓದುಗರು ಮತ್ತು ಗ್ರಂಥಾಲಯ ಸಿಬ್ಬಂದಿಗಳು ಇದ್ದರು.
