ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಎಸ್.ಟಿ. ಮೋರ್ಚಾ ಪ್ರಮುಖರ ಸಭೆಯನ್ನು ರಾಜ್ಯ
ಅದ್ಯಕ್ಷ ಶ್ರೀ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಎಸ್.ಟಿ.ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ದಿನದಿಂದ ದಿನಕ್ಕೆ ಮತ್ತಷ್ಟು ಪ್ರಭಾವಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದ್ದು ಮುಂದಿನ ದಿನಗಳಲ್ಲಿ ಪಕ್ಷ ಕೈಗೊಳ್ಳಬೇಕಿರುವ ಹೋರಾಟದ ರೂಪುರೇಷೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀರಾಮುಲು, ಶ್ರೀ ಗಾಲಿ ಜನಾರ್ಧನ್ ರೆಡ್ಡಿ,ಎಸ್‍ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ.ರಾಜೀವ್, ಶ್ರೀಮತಿ ಹೇಮಲತಾ ನಾಯಕ್,ಮಾಜಿ ಶಾಸಕರಾದ ಶ್ರೀ ರಾಮಚಂದ್ರ,ಶ್ರೀ ಪ್ರತಾಪ್ ಗೌಡ ಪಾಟೀಲ್, ಶ್ರೀ ಸಂಜಯ್ ಪಾಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ