ಕಲಬುರಗಿ/ಕಮಲಾಪೂರ:ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಕರ್ನಾಟಕ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿರುವುದರಿಂದ ಪೆಟ್ರೋಲ್ ಬೆಲೆ 3 ರೂ,ಡೀಸೆಲ್ ಬೆಲೆ 3 ರೂ.50 ಪೈಸೆ ಹೆಚ್ಚಳವಾಗಿದೆ.85 ರೂ 93 ಪೈಸೆಯಿದ್ದ ಡೀಸೆಲ್ ಬೆಲೆ 89 ರೂ.20 ಪೈಸೆಗೆ ಏರಿಕೆಯಾಗಿದ್ದರೆ,
100 ರೂಪಾಯಿ ಇದ್ದ ಪೆಟ್ರೋಲ್ ದರ 103 ರೂ.ಗೆ ಹೆಚ್ಚಳಗೊಂಡಿದೆ.
ಪೆಟ್ರೋಲ್,ಡಿಸೇಲ್ ಬೆಲೆಗಳು ದೈನಂದಿನ ಬದುಕಿಗೆ ಜನಸಾಮಾನ್ಯರು ಬಳಸುವ ಅಗತ್ಯ ಸರಕುಗಳ ಮೇಲೆಯೂ ಪರಿಣಾಮ ಬೀರುತ್ತವೆ.
ಕಳೆದ ವರ್ಷ ಬರಗಾಲ ಬಿದ್ದಿರುವುದರಿಂದಾಗಿ ಗ್ರಾಮೀಣ ಪ್ರದೇಶದ ಜನತೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳಲು ತೈಲ ಬೆಲೆ ಏರಿಸಿರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ.ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.