ಕಲಬುರ್ಗಿ: ಕಲಬುರಗಿಯಲ್ಲಿ ಸುಮಾರು ₹192 ಕೋಟಿ ಕೆಕೆಆರ್‌ಡಿಬಿ ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ. 371ಜೆ ಜಾರಿಯ ದಶಮಾನೋತ್ಸವದ ಕೊಡುಗೆಯಾಗಿ ಆಗಸ್ಟ್ ಮಾಸಾಂತ್ಯಕ್ಕೆ ಈ ಆಸ್ಪತ್ರೆಯನ್ನು ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಮರ್ಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ವರದಿ:ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ