ಬೀದರ್:ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಸೋಮವಾರ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಜಂಟಿಯಾಗಿ ಪ್ರತಿಭಟನೆ ನಡೆಸಿದರು.ನಗರದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಕಾರ್ಯಕರ್ತರು, ಅಂಬೇಡ್ಕರ್ ವೃತ್ತದವರೆಗೆ ಬೈಕ್ ಮತ್ತು ಕಾರು ಎಳೆಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡ ತೈಲ ದರ ಹೆಚ್ಚಳಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಆರು ವಸ್ತುಗಳ ಬೆಲೆ ಹೆಚ್ಚಳ ಮಾಡಿ, ಬಡ ಜನರ ಮೇಲೆ ಆರ್ಥಿಕ ಬರಹಾಕಿದೆ. ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ತೈಲ ಬೆಲೆ ಕಡಿಮೆ ಇದ್ದು ಇದೀಗ ತೆರಿಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೈಲ ಬೆಲೆ ಕಡಿಮೆ ಇತ್ತು ಎಂದು ಪ್ರತಿಭಟನಾಕಾರರು ತಿಳಿಸಿದರು. ಈ ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ್ ಪಾಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್, ಪ್ರಮುಖರಾದ ಈಶ್ವರ್ ಸಿಂಗ್ ಠಾಕೂರ್, ಶಶಿಧರ್ ಹೊಸಳ್ಳಿ ಮತ್ತಿತರರು ಭಾಗಿಯಾಗಿದ್ದರು.
ವರದಿ:ರೋಹನ್ ವಾಘಮಾರೆ