ಕಲಬುರಗಿ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ,ಪಾಲಿಕೆಯ ಮಾಜಿ ಮೇಯರ ಹಾಗೂ ಕಾಂಗ್ರೆಸ್ ಮುಖಂಡ ಶರಣು ಮೋದಿ ಅವರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ಅವರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.
ಶರಣು ಮೋದಿ ಅವರು ವಿಧಾನಸಭೆ ಚುನಾವಣೆ, ಲೋಕಸಭೆ ಚುನಾವಣೆಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ ಮತಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಹಗಲಿರುಳು ಕೆಲಸ ಮಾಡಿದ್ದಾರೆ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಟಿಕೆಟನಿಂದ ವಂಚಿತರಾಗಿದ್ದ ಅವರು, ನಿಷ್ಠಾವಂತ ಕಾರ್ಯಕರ್ತರಾಗಿ,ಕಲಬುರಗಿ ಜಿಲ್ಲೆಯಲ್ಲಿ ಸಾಕಷ್ಟು ಬಾರಿ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.
ಶರಣು ಮೋದಿ ಅವರು ಎಲ್ಲ ನಾಯಕರೊಂದಿಗೆ ಒಳ್ಳೆಯ ಸಂಬಂಧ ಹೊಂದಿದ್ದು, ದಕ್ಷಿಣ ಮತಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಟಿಕೆಟ ಕೈ ತಪ್ಪಿದರು ಕೂಡಾ ಇಡೀ ಕಲಬುರಗಿ ಜಿಲ್ಲೆಯ ಜನತೆಯ ಪರವಾಗಿ ಕೆಲಸ ಅಭಿವೃದ್ದಿಗಳಿಗೆ ಸಹಕರಿಸುತ್ತಿದ್ದಾರೆ.ಕಳೆದ ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ.
ಅವರು ಜಿಲ್ಲಾಧ್ಯಕ್ಷರಾದರೆ ಪಕ್ಷಕ್ಕೆ ಹೆಚ್ಚಿನ ಬಲ ಬರುತ್ತದೆ.ಸುಮಾರು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ, ಪ್ರಾಮಾಣಿಕವಾಗಿ ಕೆಲಸವಾಗಿ ಮಾಡಿದ್ದಾರೆ. ಇಲ್ಲಿಯವರೆಗೆ ಪಕ್ಷದಲ್ಲಿ ಯಾವುದೇ ಅಧಿಕಾರ ಅಥವಾ ಹುದ್ದೆಗೆ ಆಸೆಪಟ್ಟಿರುವುದಿಲ್ಲ. ಸಕ್ರೀಯವಾಗಿ ಪಕ್ಷದ ಕೆಲಸವನ್ನು ನಿಭಾಯಿಸುತ್ತಾ ಬಂದಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.ಕೂಡಲೇ ಕಾಂಗ್ರೆಸ್ ಹೈಕಮಾಂಡವು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶರಣು ಮೋದಿ ಅವರನ್ನು ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಅವರು ಮನವಿ ಮಾಡಿಕೊಂಡರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.