ಕೊಪ್ಪಳ:’ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕುʼ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಮಾಧ್ಯಮ ವರದಿ ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ.
ಜಿಲ್ಲಾಸ್ಪತ್ರೆಯಲ್ಲಿ ದಂತ ವಿಭಾಗದ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಲ್ಲಿ ಶಸ್ತ್ರಚಿಕಿತ್ಸೆಗಳಿಗೆ ಯಾವುದೇ ತೊಂದರೆ ಇರುವುದಿಲ್ಲ. ಇನ್ನುಳಿದ ಕಿವಿ, ಮೂಗು ಮತ್ತು ಗಂಟಲು ವಿಭಾಗ, ನೇತ್ರ ಚಿಕಿತ್ಸಾ ವಿಭಾಗ ಹಾಗೂ ಎಲುಬು ಮತ್ತು ಕೀಲು ವಿಭಾಗದ ಮುಖ್ಯಸ್ಥರುಗಳಿಗೆ ಪ್ರಗತಿಯನ್ನು ಸಾಧಿಸುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿರುತ್ತದೆ. ಪ್ರತಿ 15 ದಿನಕ್ಕೊಮ್ಮೆ ನಡೆಯುವ ಮುಖ್ಯಸ್ಥರ ಸಭೆಯಲ್ಲಿ ಸಹ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ನೀಡುವಂತೆ ವೈದ್ಯರಿಗೆ ಮನವರಿಕೆ ಮಾಡಿ ಪ್ರೋತ್ಸಾಹದೊಂದಿಗೆ ಪ್ರಗತಿ ಸಾಧಿಸುವಂತೆ ಸೂಚನೆ ನೀಡಲಾಗಿರುತ್ತದೆ.
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ
@osd_cmkarnataka
`ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.
ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ