ಕೊಪ್ಪಳ:ಕರ್ನಾಟಕ ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಕೊಟ್ಟ ಉಚಿತ ಬೋಗಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡುವ ಮೂಲಕ ಸಾಮಾನ್ಯ ಜನರ ಬದುಕಿನ ಜೊತೆಗೆ ಚೆಲ್ಲಾಟವಾಡಿದಂತಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಆದಾಯದ ಮೂಲಗಳ ಬಗ್ಗೆ ಸ್ಪಷ್ಟನೆ ನೀಡಲು ವಿಫಲವಾಗಿದೆ. ಈ ಹಿಂದೆ ವಿದ್ಯುತ್ ದರ ಏರಿಕೆ ಮಾಡಿದ್ದಲ್ಲದೇ ಈಗ ಪೆಟ್ರೋಲ್ ರೂ.3 ಹಾಗೂ ಡೀಸೆಲ್ ರೂ.3.50 ರಷ್ಟು ಬೆಲೆ ಹೆಚ್ಚಳ ಮಾಡಿ, ಸಾರ್ವಜನಿಕರ ಮೇಲೆ ಬರೆ ಎಳೆದಿದೆ ಎಂದು ಗ್ರಾಮ ಮತ್ತು ನಗರ ಸಬಲೀಕರಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದ ಯಮನೂರ* ನಾಯಕ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕ್ರಮವನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಾ, ಸರ್ಕಾರದ ವಿವಿಧ ನಿಗಮ ಮಂಡಳಿಗಳ ಅನುದಾನ, ವಿವಿಧ ಕಾಮಗಾರಿ ಯೋಜನೆಗಳ ಅನುದಾನ, ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನಗಳನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುವ ಮೂಲಕ, ಸರ್ಕಾರ ಅಭಿವೃದ್ಧಿಯಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿರುವ ಮೂಲಕ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದೆ. ಈ ತೈಲ ದರಗಳ ಏರಿಕೆಯಿಂದ ಜನಸಾಮಾನ್ಯರು ಪ್ರತಿನಿತ್ಯ ಬಳಸವು ಅಗತ್ಯ ವಸ್ತುಗಳ ಬೆಲೆಗಳು ಹಾಗೂ ಪ್ರಯಾಣದರ ಏರಿಕೆಯಾಗುವ ಭೀತಿಯನ್ನು ಸಾರ್ವಜನಿಕರು ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಕೂಡಲೇ ಜನಸಾಮಾನ್ಯರ ಹಿತದೃಷ್ಟಿಯಿಂದ ತೈಲ ಬೆಲೆ ಏರಿಕೆ ಕ್ರಮವನ್ನು ಹಿಂಪಡೆಯಬೇಕು.ಇಲ್ಲದಿದ್ದಲ್ಲಿ ನಮ್ಮ ಸಂಘಟನೆ ವತಿಯಿಂದ ರಾಜ್ಯಾಧ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.