ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜಾನುವಾರುಗಳ ಚರ್ಮಗಂಟು ರೋಗಕ್ಕೆ ಉಚಿತ ಲಸಿಕೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿರುವ ದನಗಳಿಗೆ ದಿನಾಂಕ: 20-06-2024 ರಿಂದ 20-07-2024 ರವರೆಗೆ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮೇಕೆ ಸಿಡುಬು (ಉoಚಿಣ Pox) ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಚರ್ಮ ಗಂಟು ರೋಗವು ಕ್ಯಾಪ್ರಿ ಫಾಕ್ಸ್ ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಮೇಕೆ ಸಿಡುಬು ಲಸಿಕೆಯಿಂದ ಇದನ್ನು ತಡೆಗಟ್ಟಬಹುದಾಗಿದೆ.
2023-24 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಈ ರೋಗೋದ್ರೇಕವು ಅತಿ ಹೆಚ್ಚಾಗಿ ಮಳೆಗಾಲ ಮುಕ್ತಾಯವಾದ ಕೂಡಲೇ ಕಂಡುಬಂದಿರುತ್ತದೆ. ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆಗಾಲದಲ್ಲಿ ಹೆಚ್ಚಾಗುವ ಸೊಳ್ಳೆ, ನೊಣ ಹಾಗೂ ಕೀಟಗಳ ಕಡಿತದಿಂದ ರೋಗವು ಜಾನುವಾರುವಿನಿಂದ ಜಾನುವಾರುವಿಗೆ ಹರಡುವುದರಿಂದ ಮುಂಜಾಗ್ರತಾ ಕ್ರಮವಾಗಿ ರೋಗದ ವಿರುದ್ಧ 2024-25 ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿರುವ ದನಗಳಿಗೆ ಜೂನ್ 20 ರಿಂದ ಜುಲೈ 20 ರವರೆಗೆ ಮೇಕೆ ಸಿಡುಬು ಲಸಿಕೆ ಹಾಕಲಾಗುವುದು.
ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು, ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ದನಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬಹುದೆಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಶಿವಯೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ