ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾನಾ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಶಾಸಕರಾದ:ಶ್ರೀ ಚನ್ನಾರೆಡ್ಡಿ ಪಾಟೀಲ ತುನ್ನೂರ್

ಯಾದಗಿರಿ:ಸರಕಾರದ ವಿವಿಧ ಇಲಾಖೆಯ ವಿವಿಧ ಯೋಜನೆಗಳಡಿ ಪ್ರಗತಿಯಲ್ಲಿರುವ ನಾನಾ ಅಭಿವೃದ್ಧಿ
ಕಾಮಗಾರಿಗಳನ್ನು ಕಾಲವಿಳಂಬ ಮಾಡದೆ ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಯಾದಗಿರಿ ವಿಧಾಸಭಾ ಮತಕ್ಷೇತ್ರದ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ ತುನ್ನೂರ್ ಅವರು ಹೇಳಿದರು.ಅವರು ಜೂ.೧೯ರಂದು ಯಾದಗಿರಿ ತಾಲೂಕ ಪಂಚಾಯತ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ತಾಲೂಕ ಮಟ್ಟದ ನಾನಾ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳಡಿ ಅನುಷ್ಠಾನ ಮಾಡಿದ ಕಾಮಗಾರಿಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಾದಗಿರಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಶಿಕ್ಷಣ ಇಲಾಖೆಯ ಒಂಭತ್ತು ಶಾಲೆಗಳ ದುರಸ್ತಿ ಕಾರ್ಯ ಪ್ರಗತಿಯ ಹಂತದಲ್ಲಿದೆ ಮಳೆಗಾಲ ಆರಂಭವಾಗಿದ್ದು, ಮಕ್ಕಳ ಅಭ್ಯಾಸಕ್ಕೆ ಸಮಸ್ಯೆಯಾಗದಂತೆ ವಿಳಂಬ ಮಾಡದೆ ಶೀಘ್ರವಾಗಿ ಶಾಲೆಗಳ ದುರಸ್ತಿ ಮಾಡಿಕೊಡಿ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಸರಕಾರಿ ಶಾಲೆಗಳಿಗೆ ಅಗತ್ಯವಾದ ಶಾಲಾ ಕಂಪೌಂಡ, ಶೌಚಾಲಯ,ಅಡುಗೆ ಕೋಣೆ, ಮೈದಾನಗಳ ಬೇಡಿಕೆ ಇರುವ ಶಾಲೆಗಳಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡುವ ಮೂಲಕ,ನಿರ್ಮಿಸಿ ಕೊಡಿ ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಹೇಳಿದರು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಕಟಗೊಂಡ ಹತ್ತನೇ ತರಗತಿಯ ಫಲಿತಾಂಶವು ರಾಜ್ಯದಲ್ಲಿ ಅತೀ ಕಡಿಮೆಯಾಗಿದ್ದು,ಫಲಿತಾಂಶ ಕಡಿಮೆಗೆ ಕಾರಣಗಳೇನು.,..?
ಎಂಬುದನ್ನು ಗುರುತಿಸಿ ಸೂಕ್ತ ಪರಿಹಾರಕ್ಕೆ ಕ್ರಮವಹಿಸಿ,ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಜವಾಬ್ದಾರಿಯಿಂದ ಕೆಲಸ ಮಾಡಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲವು ಅಂಗನವಾಡಿಗಳ ಮೇಲ್ಚಾವಣಿಗಳು ಮಳೆಗಾಲದಲ್ಲಿ ಸೋರುತ್ತಿವೆ. ಕುಡಿಯುವ ನೀರು, ಕಾಂಪೌಂಡು ದುರಸ್ತಿ ಮಾಡಿಕೊಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನ ಮಾಡಿದ ಕುಡಿಯುವ ನೀರಿನ ಕಾಮಗಾರಿಗಳು ಪೂರ್ಣಗೊಂಡ ನಂತರ ಎಲ್ಲಾ ಮನೆಗಳಿಗೆ ನೀರು ಬರುವದನ್ನು ಖಾತ್ರಿ ಪಡಿಸಿಕೊಂಡ ಬಳಿಕ ಗ್ರಾಮ ಪಂಚಾಯಿತಿ ಸುಪರ್ಧಿಗೆ ಪಡೆಯಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಗುತ್ತಿಗೆದಾರರಿಂದ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ತೆಗೆದುಕೊಂಡು ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಸಮುದಾಯ ಕಾಮಗಾರಿಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್‌ನಲ್ಲಿ ಹಾಕುವ ಪ್ರತಿದಿನದ ಹಾಜರಾತಿ ಪಾರದರ್ಶಕವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಪಿಡಿಒ ಅವರಿಗೆ ಸೂಚಿಸಿದರು.

ಮಳೆಗಾಲ ಆರಂಭವಾಗಿದ್ದು ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ಸೋರಿಕೆ ತಡೆಯಲು ಪೈಪ್ ಲೈನ್‌ಗಳನ್ನು ದುರಸ್ತಿ ಮಾಡಿ, ಹೂಳು ತುಂಬಿದ ಚರಂಡಿಗಳನ್ನು ಸ್ವಚ್ಛಗೊಳಿಸಿ ಎಂದು ಹೇಳಿದ ಅವರು, ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ನಷ್ಟದ ಅಗತ್ಯ ಮಾಹಿತಿಯನ್ನು ಸಲ್ಲಿಸಲು ಸೂಕ್ತ ಕ್ರಮವಹಿಸಿ ಎಂದು ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಅನುದಾನದ ಕಾಮಗಾರಿಗಳನ್ನು ನಿರ್ವಹಿಸುವುದು ಅಗತ್ಯವಾದರೆ, ಕಾಮಗಾರಿಗಳ ಮಾಹಿತಿಯೊಂದಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಈ ವೇಳೆ ವಡಗೇರಾ ತಾಲೂಕ ಪಂಚಾಯಿತಿ
ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಸಂಗ್ವಾರ್, ಯಾದಗಿರಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಬಸವರಾಜ್ ಶರಣ್ಯ, ತಾಲೂಕ ಯೋಜನಾಧಿಕಾರಿಗಳಾದ ಶ್ರೀ ಶಶಿಧರ ಹಿರೇಮಠ, ತಾಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ವರದಿ:ಶಿವರಾಜ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ