ಬೀದರ್ ಜಿಲ್ಲೆಯ ಔರಾದ್ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ 19.06.204 ರಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ಸರ್ಕಾರ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಡಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಬಿಎ ಬಿಎಸ್ಸಿ ಬಿಕಾಂ ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಕಲಿಕೆ ಜೊತೆ ಕೌಶಲ್ಯ ಎಂಬ ಉದ್ಯಮ ಶೀಲತೆಯ ವಿನೂತನ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕಲಿಕೆ ಜೊತೆ ಕೌಶಲ್ಯದ ಸಂಯೋಜಕರಾದ ಶ್ರೀ ಮಹೇಶ್ ಕುಮಾರ್ ಆರ್ ಅವರು ಸ್ವಾಗತಿಸಿ ಪ್ರಾಸ್ತಾವಿಕ ಭಾಷಣವನ್ನು ಮಾಡಿ ಬಿಎ ಮತ್ತು ಬಿ ಎಸ್ ಸಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಹಾಗೂ ಬಿಕಾಂ ವಿದ್ಯಾರ್ಥಿಗಳಿಗೆ ಜಿಎಸ್‌ಟಿ ಅಕೌಂಟಿಂಗ್ ವಿಷಯಗಳ ಕುರಿತು ತರಬೇತಿಯನ್ನು ನೀಡುವರು ಎಂದು ತಿಳಿಸಿದರು.ತರಬೇತಿಯನ್ನು ನೀಡಲು ಆಗಮಿಸಿದ ಟ್ರೈನಿಂಗ್ ಪಾರ್ಟ್ನರ್ ಬೀದರ್ ವತಿಯಿಂದ ಶ್ರೀ ದಯಾನಂದ್ ಹಿರೇಮಠ ಅವರು ಮಾತನಾಡುತ್ತಾ ಈ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮವು 50 ಗಂಟೆಗಳಿಂದ ಕೂಡಿದ್ದು 50 ಅಂಕಗಳಿಂದ ಕೂಡಿದೆ ಎಂದು ಅದರ ರೂಪುರೇಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ನಂತರ ಬಿ.ಎ 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲು ಬಂದ ಶ್ರೀಮತಿ ಅಶ್ವಿನಿ ಹಿರೇಮಠ್ ತರಬೇತಿದಾರರು ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ವಿಷಯದ ಕುರಿತು ತಿಳಿಸಿ ತರಬೇತಿಯನ್ನು ನಡೆಸಿಕೊಟ್ಟರು.ಅಧ್ಯಕ್ಷತೆ ವಹಿಸಿದ ಡಾಕ್ಟರ್ ಸೂರ್ಯಕಾಂತ್ ಚಿದರಿ ಪ್ರಾಂಶುಪಾಲರು ಕಾರ್ಯಕ್ರಮವನ್ನು ಉದ್ಘಾಟಿಸಿ ಸರ್ಕಾರದ ಈ ಯೋಜನೆಯು ಬಹಳ ಸೂಕ್ತವಾಗಿದ್ದು ಇಂದಿನ ಸ್ಪರ್ಧಾತ್ಮಕ ಸಮಾಜದಲ್ಲಿ ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಕಲಿಕೆ ಜೊತೆ ಕೌಶಲ್ಯ ತರಬೇತಿಯ ಮೂಲಕ ಕೌಶಲ್ಯ ಜ್ಞಾನವನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯತನ್ನು ರೂಪಿಸಿಕೊಳ್ಳಲು ಸಹಕಾರಿ ಆಗಿದೆ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರಾಧ್ಯಾಪಕರ ವರ್ಗದವರು ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.ಅಲ್ಲದೆ ಬಿಎ ಬಿಎಸ್ಸಿ ಬಿಕಾಂ ತರಗತಿಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಈ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕಲ್ಯಾಣ ಅಧಿಕಾರಿಗಳಾದ ಡಾಕ್ಟರ್ ಸಂಜೀವ್ ಕುಮಾರ್ ತಾಂಡಳೆ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.ಕೊನೆಗೆ ರಾಷ್ಟ್ರಗೀತೆಯೊಂದಿಗೆ ಈ ಕಾರ್ಯಕ್ರಮವು ಮುಕ್ತಾಯಗೊಂಡಿತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.