ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶ್ಯಾಮ ನಾಟೀಕಾರ ಆಯ್ಕೆಗೆ ಮನವಿ

ಕಲಬುರಗಿ:ಕಾಂಗ್ರೆಸ್ ಮುಖಂಡ ಹಾಗೂ ಮಾದಿಗ ಸಮಾಜದ ಹಿರಿಯರಾದ ಶ್ಯಾಮ ನಾಟೀಕಾರ ಅವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಗುರುನಾಥ ಸಿಂಗೆ ಡೊಂಗರಗಾಂವ ಅವರು ಕಾಂಗ್ರೆಸ್ ಹೈಕಮಾಂಡ ಬಳಿ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ‌ ನೀಡಿದ ಅವರು ಶ್ಯಾಮ ನಾಟೀಕಾರ ಅವರು ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಮತ್ತು ಮಹಾನಗರ ಪಾಲಿಕೆ ಚುನಾವಣೆ,ಜಿಪಂ ಹಾಗೂ ತಾಪಂ ಮತಕ್ಷೇತ್ರದ ಚುನಾವಣೆಯಲ್ಲಿ ಹಗಲಿರುಳು ದುಡಿದಿದ್ದಾರೆ ಮತ್ತು 2009ರ ಲೋಕಸಭೆ ಚುನಾವಣೆ ಯಿಂದ ಇಲ್ಲಿಯವರೆಗೆ ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆಯಲ್ಲಿ ಹಗಲಿರುಳು ದುಡದಿದ್ದಾರೆ. ಕಾಂಗ್ರೆಸ್ ಪಕ್ಷದ ಸದಸ್ಯರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಶ್ಯಾಮ ನಾಟೀಕಾರ ಅವರು ಎಲ್ಲಾ ನಾಯಕರೊಂದಿಗೆ ಒಳ್ಳೆಯ ಸಂಬಂಧ ಹೊಂದಿದ್ದು, ಕಳೆದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾರೆ. ಅವರು ಜಿಲ್ಲಾಧ್ಯಕ್ಷರಾದರೆ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂದರು. ಅವರು ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ, ಪ್ರಮಾಣಿಕವಾಗಿ ಕೆಲಸ ಮಾಡಿದ್ದಾರೆ. ಇಲ್ಲಿಯವರೆಗೆ ಪಕ್ಷದಲ್ಲಿ ಯಾವುದೇ ಅಧಿಕಾರ ಅಥವಾ ಹುದ್ದೆಗೆ ಆಸೆ ಪಡದೆ ಸಕ್ರಿಯವಾಗಿ ಪಕ್ಷದ ಕೆಲಸವನ್ನು ನಿಭಾಯಿಸುತ್ತಾ ಬರುತ್ತಾರೆ.ಇಂತಹ ಒಬ್ಬ ನಿಷ್ಠಾವಂತ ಕಾರ್ಯಕರ್ತ ಶ್ಯಾಮ ನಾಟೀಕಾರ ಅವರನ್ನು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ ನಾಯಕರಲ್ಲಿ ಅವರು ಮನವಿ ಮಾಡಿಕೊಂಡರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ