ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ

ಶಿವಮೊಗ್ಗ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ,ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಗ್ಗೆ 10.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು,ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜಿಲ್ಲೆಯ ಸಂಸದರು,ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು,ಜನಪ್ರತಿನಿಧಿಗಳು,ಪಾಲಿಕೆ ಮಹಾಪೌರರು,ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು,ಜಿಲ್ಲಾ ಒಕ್ಕಲಿಗರ ಸಂಘಗಳ ಮುಖಂಡರು/ಅಧ್ಯಕ್ಷರು,ಪದಾಧಿಕಾರಿಗಳು,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು,ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ,ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು,ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿವಮೊಗ್ಗ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎಂಬಿ.ಎ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗಿರಿಧರ್ ಕೆ.ವಿ.ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ