ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಚ್ಚುವರಿ ನೂತನ ಕೊಠಡಿಗಳನ್ನು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ರವರು ಉದ್ಘಾಟನೆ ಮಾಡಿ ವಿದ್ಯಾರ್ಥಿಗಳೇ ಸದುಪಯೋಗಪಡಿಸಿಕೊಂಡು ಉತ್ತಮ ವ್ಯಾಸಂಗ ಮಾಡಿ ಕಾಲೇಜು ಮತ್ತು ತಂದೆ ತಾಯಿ ಹಾಗೂ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಸಮಾಜದ ಸ್ವಾಸ್ಥ ಕಾಪಾಡಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಗಳಾದ ಅಹಮದ್ ಆಶ್ರಯ ಸಮಿತಿ ಅಧ್ಯಕ್ಷರಾದ ನಿತಿನ್ ವೆಂಕಟೇಶ್ ರವರು ಕೆಪಿಸಿಸಿ ಸದಸ್ಯರಾದ ಡಿಟಿ ಸ್ವಾಮಿರವರು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತಿ ಸದಸ್ಯರಾದ ಜಗದೀಶ್ ರವರು ಉಪಾಧ್ಯಕ್ಷರಾದ ಪ್ರಭಾವತಿ ಪ್ರಾಂಶುಪಾಲರು ಉಪನ್ಯಾಸಕರು ಕಾಂಗ್ರೆಸ್ ಕಾರ್ಯಕರ್ತರು ಇದೇ ಸಂದರ್ಭದಲ್ಲಿ ಹಾಜರಿದ್ದರು.
