ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಂಗನವಾಡಿ ಕೇಂದ್ರಗಳ ಉನ್ನತೀಕರಣ

ಬೆಂಗಳೂರು:ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ,ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

“ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದ್ದಾರೆ. ಇಲಾಖೆಯ ಮೂಲಕವೇ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಬ್ಯಾಗ್‌ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ