ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗವಿಮಠದ ಉಚಿತ ಶಿಕ್ಷಣ ಯೋಜನೆಗಳಿಗೆ ಅನುದಾನ ನೀಡಲು ಸಿವಿಸಿ ಆಗ್ರಹ

ಕೊಪ್ಪಳ:ಅನ್ನ, ಅಕ್ಷರ ಹಾಗೂ ಆಧ್ಯಾತ್ಮದ ತ್ರಿವಳಿ ಸಂಗಮವಾದ ಶ್ರೀ ಗವಿಮಠಕ್ಕೆ ಈ ಹಿಂದೆ ಸರಕಾರ ಆಶ್ವಾಸನೆ ನೀಡಿದಂತೆ 10 ಕೋಟಿ ರೂಪಾಯಿ ಅನುದಾನವನ್ನು ವಿದ್ಯಾರ್ಥಿಗಳ ಉಚಿತ ಪ್ರಸಾದ ವಸತಿ ನಿಲಯಕ್ಕೆ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಆಗ್ರಹಪಡಿಸಿದ್ದಾರೆ.

5,000 ಮಕ್ಕಳ ಉಚಿತ ಪ್ರಸಾದ ನಿಲಯವು ಇದೇ
ಜುಲೈ ಒಂದರಂದು ಲೋಕಾರ್ಪಣೆಗೊಳ್ಳುತ್ತಿದೆ. ಕೋಳೂರು ಹಾಗೂ ಕಾಟ್ನಳ್ಳಿಯಲ್ಲಿ ಎರಡು ನೂತನ ಕ್ಯಾಂಪಸ್ ಗಳು ತಲೆಯೆತ್ತಲಿವೆ.ಶ್ರೀ ಮಠದಲ್ಲಿ ನೆಲೆ ನಿಂತು ಶಿಕ್ಷಣ ಪಡೆಯುವ ಬಡ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಅದರಲ್ಲೂ ಹೆಣ್ಣು ಮಕ್ಕಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿದೆ.ಇದು ಶ್ರೀಮಠದ ಲೋಕ ಕಲ್ಯಾಣ ಹಾಗೂ ಶಿಕ್ಷಣ ಕ್ರಾಂತಿಯ ಬಗ್ಗೆ ಜನ ಮಾನಸದ ಬೆಂಬಲವನ್ನು ಸೂಚಿಸುತ್ತದೆ ಎಂದು ಅವರು ನಾಲ್ಕು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಠದ ವಿದ್ಯಾರ್ಥಿಗಳ ಬದುಕಿಗೆ ಉಚಿತ ಪ್ರಸಾದ ನಿಲಯಕ್ಕೆ 10 ಕೋಟಿ ರೂಪಾಯಿ ಅನುದಾನ ಕೂಡಲೇ ಒದಗಿಸುವ ಕುರಿತು ಶ್ರೀಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದರು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡತನದ ಹಿನ್ನೆಲೆಯಿಂದ ಬಂದವರು.ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಪಡೆದು ಕಷ್ಟಪಟ್ಟು ಉನ್ನತ ಹುದ್ದೆಗೆ ಏರಿದ್ದಾರೆ.ಬಡವರ ಬಗೆಗಿನ ಅವರ ಕಾಳಜಿ ಅನನ್ಯ ಹಾಗೂ ಪ್ರಶ್ನಾತೀತ. ಸಿದ್ದರಾಮಯ್ಯ ಹಾಗೂ ಕೊಪ್ಪಳದ ಸಂಬಂಧ
ದಶಕಗಳಷ್ಟು ಹಳೆಯದು ಹೀಗಾಗಿ ಮುಖ್ಯಮಂತ್ರಿಯವರು ಈ ಕೂಡಲೇ ಬಡವರ ಬಗೆಗಿನ ಹಾಗೂ ದುರ್ಬಲರ ಆಶಾಕಿರಣವಾಗಬಲ್ಲ ಯೋಜನೆಗೆ ಈ ಸರಕಾರ ವಾಗ್ದಾನ ಮಾಡಿದಂತೆ 10 ಕೋಟಿ ರೂಪಾಯಿಯನ್ನು ಬಿಡುಗಡೆಗೊಳಿ ಸಬೇಕು ಎಂದು ಅವರು ಆಗ್ರಹಿಸಿ ಜಿಲ್ಲೆಯಲ್ಲಿರುವ ಎಲ್ಲಾ , ಸಂಸದರು ಹಾಗೂ ಜನ ಪ್ರತಿನಿಧಿಗಳು ಪಕ್ಷಾತೀತವಾಗಿ ಸರಕಾರದ ಒತ್ತಡ ತಂದು ಅನು ದಾನವನ್ನು ಒದಗಿಸಿಕೊಟ್ಟರೆ ಒಂದು ಶಿಕ್ಷಣ ಕ್ರಾಂತಿಗೆ ಮುಖ್ಯ ಕೊಡುಗೆಯಾಗಲಿದೆ ಎಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ