ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರಿಗಿರುವಂತಹ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು;ತಹಸೀಲ್ದಾರ್ ವೈ ಕೆ ಗುರುಪ್ರಸಾದ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ರೈತರಿಗಿರುವಂತಹ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ತಹಸೀಲ್ದಾರ್ ವೈ ಕೆ ಗುರುಪ್ರಸಾದ್ ಹೇಳಿದರು.

ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ರೈತರ ಕುಂದು ಕೊರತೆ ನಿವಾರಣೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ತಾಲೂಕಿನಲ್ಲಿರುವ ವಿವಿಧ ಇಲಾಖೆಗಳಲ್ಲಿ ಸಮಸ್ಯೆಗಳಿದ್ದಲ್ಲಿ ಅಂತಹ ಸಮಸ್ಯೆಗಳನ್ನು ರೈತರು ಮುಕ್ತವಾಗಿ ಹೇಳಲು ಅವಕಾಶವಿದ್ದು ಎಲ್ಲಾ ರೈತರು ಇದರ ಸದುಪಯೋಗ ಪಡೆದುಕೊಳ್ಳಿ ಜೊತೆಗೆ ಅಧಿಕಾರಿಗಳು ಸಹ ಇಂದು ತಮ್ಮ ಪ್ರಶ್ನೆಗೆ ಉತ್ತರ ನೀಡಲಿದ್ದು ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ರೈತರ ಕುಂದು ಕೊರತೆ ಸಭೆಯಲ್ಲಿ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ರೈತರು ದೂರಿದ ಹಿನ್ನಲೆ ಮದ್ಯ ಅಕ್ರಮ ಮಾರಾಟದ ಬಗ್ಗೆ ಮಾಧ್ಯಮದಲ್ಲಿ ಸುದ್ದಿ ಪ್ರಕಟಣೆ ಯಾದ ಹಿನ್ನಲೆ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು.ಈ ಮಧ್ಯೆ ಪ್ರವೇಶ ಮಾಡಿದ ತಹಸೀಲ್ದಾರ್ ಗುರುಪ್ರಸಾದ್ ಮುಂದಿನ ದಿನಗಳಲ್ಲಿ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡದಂತೆ ಜೊತೆಗೆ ಶಾಲಾ ಮುಂಭಾಗ ಮದ್ಯದ ಪೌಚ್ ಬಿದ್ದಿರುವುದನ್ನು ನೋಡಿ ಕೊಂಚ ಸಿಟ್ಟು ಮಾಡಿಕೊಂಡು ಈ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿಬೇಕು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ರೈತರು ಮಾತನಾಡಿ ಹನೂರು ತಾಲೂಕಿನ ಉದ್ದಗಲಕ್ಕು ರಸ್ತೆ ತುಂಬಾ ಅವ್ಯವಸ್ಥೆಯಾಗಿದೆ ಗುಂಡಿ ಮಯವಾಗಿದೆ ಜೊತೆಗೆ ನಾಲ್ ರೋಡು ರಾಮಾಪುರ ರಸ್ತೆ ಉದ್ಘಾಟನೆಯಾದರೂ ಕಾಮಗಾರಿ ಪ್ರಾರಂಭವಾಗಿಲ್ಲ ಈಗಾಗಿ ತುಂಬಾ ತೊಂದರೆಯಾಗಿದೆ ಎಂದು ದೂರಿದರು.ಜೊತೆಗೆ ಮುಖ್ಯವಾಗಿ ರೈತರ ಜಮೀನುಗಳಿಗೆ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ ಇದರಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಬೇಕು ಅಲ್ಲದೇ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು ಜೊತೆಗೆ ರೈತರಿಗೆ ಬರ ಪರಿಹಾರದ ಹಣ ಬರುತ್ತಿಲ್ಲ ಹಾಗಾಗಿ ಆದಷ್ಟು ಬೇಗ ಈ ಬಗ್ಗೆ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.
ಕೃಷಿ ಇಲಾಖೆಯಲ್ಲಿ ಅನೇಕ ಕಾರ್ಯಕ್ರಮಗಳಿದ್ದು ಅದರ ಪ್ರಯೋಜನ ರೈತರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ ಇದರಿಂದ ಸರಿಯಾದ ಮಾಹಿತಿ ನೀಡಿ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಬಾಲ್ಯ ವಿವಾಹ ನಿಲ್ಲಿಸಿ:ತಾಲೂಕಿನಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದೂ ಸಾಧ್ಯವಾದಷ್ಟು ಎಲ್ಲರೂ ಸೇರಿ ಬಾಲ್ಯ ವಿವಾಹ ನಿಲ್ಲಿಸುವ ಪ್ರಯತ್ನ ಮಾಡೋಣ ಎಂದು ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮನವಿ ಮಾತನಾಡಿದರು.

ತೋಟಗಾರಿಕೆ ಇಲಾಖೆಯ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಿ:
ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಅನೇಕ ರೀತಿಯಲ್ಲಿ ಕಾರ್ಯಕ್ರಮಗಳಿದ್ದು ಇದು ನಮ್ಮ ರೈತರಿಗೆ ಸರಿಯಾದ ಮಾಹಿತಿ ಇಲ್ಲ ಮಾಹಿತಿ ಕೊರತೆಯಿಂದಾಗಿ ನಮ್ಮ ರೈತರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ ಹಾಗಾಗಿ ಮುಂದಿನ ದಿನಗಳಲ್ಲಿ ತೋಟಗಾರಿಕೆಯ ಇಲಾಖೆಯಲ್ಲಿ ರೈತರಿಗೆ ಇರುವ ಕಾರ್ಯಕ್ರಮಗಳ ಬಗ್ಗೆ ತರಬೇತಿ ನೀಡಿ ಎಂದು ಮನವಿ ಮಾಡಿದರು.

ಆಂಬುಲೆನ್ಸ್ ನೀಡಿ:ಹನೂರು ತಾಲೂಕಿನಲ್ಲಿ ಕೇವಲ 3 ಆಂಬುಲೆನ್ಸ್ ಗಳು ಕೆಲಸ ಮಾಡುತ್ತಿದ್ದೂ ಅದರಲ್ಲೂ ಕೇವಲ 2 ಆಂಬುಲೆನ್ಸ್ ಗಳು ಮಾತ್ರ ಕೆಲಸ ನಿರ್ವಹಿಸುತ್ತಿದ್ದು ಉಳಿದಂತೆ ವಿವಿಧೆಡೆ ಆಂಬುಲೆನ್ಸ್ ಗಳ ಕೊರೆತೆ ಎದ್ದು ಕಾಡುತ್ತಿದೆ ಹಾಗಾಗಿ ಆಂಬುಲೆನ್ಸ್ ಗಳ ಕೊರತೆ ನೀಗಿಸಬೇಕು ಆಸ್ಪತ್ರೆಗಳಲ್ಲಿ ವೈದ್ಯರು ಉಳಿದು ಚಿಕಿತ್ಸೆ ನೀಡುವಂತಾಗಬೇಕು ಎಂದು ರೈತರು ಆಗ್ರಹ ಮಾಡಿದರು.

ಅಲ್ಲದೇ ತಾಲೂಕಿನಲ್ಲಿ ಕೆಲವೆಡೆ ಶಾಲಾ ಶಿಕ್ಷಕರು ಸಮಯಕ್ಕೆ ಮುಂಚಿತವಾಗಿ ಶಾಲೆ ಬಿಟ್ಟು ಬರುತ್ತಿದ್ದಾರೆ ಹಾಗಾಗಿ ಅಂತಹ ಕಡೆ ನಿಗಾ ವಹಿಸಿ ಜೊತೆಗೆ ಅಂಗನವಾಡಿ ಕೇಂದ್ರಗಳಲ್ಲಿ ಹುಳು ಮಿಶ್ರಿತ ಆಹಾರ ಕೊಡುತ್ತಿದ್ದೂ ಅದರ ಬಗ್ಗೆ ಸಂಬಂಧ ಪಟ್ಟವರು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗೃಹಲಕ್ಷ್ಮಿ ಆತಂಕ ಬಿಡಿ:
ಹನೂರು ತಾಲೂಕಿನಲ್ಲಿ 46146 ಫಲಾನುಭವಿಗಳು ಈಗಾಗಲೇ ನೋಂದಣಿ ಮಾಡಿದ್ದು ಅವರಿಗೆ ಗೃಹಲಕ್ಷ್ಮಿ ಹಣ ತಲುಪುತ್ತಿದೆ ಉಳಿದಂತೆ 300 ಜನ ಫಲಾನುಭವಿಗಳಿಗೆ ನಾನಾ ಕಾರಣಗಳಿಂದ ತಲುಪಿಲ್ಲ ಅವರಿಗೆ ಈಗಾಗಲೇ ಕರೆ ಮಾಡಿ ತಿಳಿಸಿದ್ದು ಕೆ ವೈ ಸಿ ಮಾಡಿಸಲು ತಿಳಿಸಲಾಗಿದೆ.ಜೊತೆಗೆ ಮುಖ್ಯವಾಗಿ ಇನ್ನೂ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಿಡಿಪಿಒ ನಂಜಮಣಿ ಹೇಳಿದರು.

ಕೃಷಿ ಇಲಾಖೆಯಿಂದ ನೀಡುವ ರೋಟ್ರಿ ಗೆ ಒಂದು ಲಕ್ಷ ಸಬ್ಸಿಡಿ ಮತ್ತು ಸಾಮಾನ್ಯ ವರ್ಗಕ್ಕೆ 75,000 ಸಬ್ಸಿಡಿ ರೈತರಿಗೆ ನೀಡಿ ನಗದು ರೂಪದಲ್ಲಿ 61,000 ಮತ್ತು ಸಾಮಾನ್ಯ ವರ್ಗಕ್ಕೆ 97,000 ಪಡೆಯುತ್ತಿದ್ದೀರಾ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಹನೂರು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಜನಸ್ಪಂದನ ಕಾರ್ಯಕ್ರಮದಲ್ಲಿ ಕೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕೃಷಿ ಇಲಾಖೆ ನಿರ್ದೇಶಕಿ ಸುಂದರಮ್ಮ ಇದರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಪಡಿಸುವುದಾಗಿ ತಿಳಿಸಿದರು.

ಇದೆ ಸಂದರ್ಭದಲ್ಲಿ ತಹಸೀಲ್ದಾರ್ ವೈ ಕೆ ಗುರುಪ್ರಸಾದ್,ತಾಲ್ಲೂಕು ಪಂಚಾಯಿತಿ ಇ ಒ ಉಮೇಶ್,ಸಿ ಡಿ ಪಿ ಒ ನಂಜಮಣಿ,ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದ್ರಮ್ಮ,ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ವಿನುತಾ, ತಾಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ಹಾಗೂ ಗ್ರೇಡ್ 2 ತಹಸಿಲ್ದಾರ್ ಡಾ.ಧನಂಜಯ್ ರಾಮಪುರ ಉಪ ತಹಸಿಲ್ದಾರ್ ಸುರೇಖಾ,ಉಪತಹಸಿಲ್ದಾರ್ ವೆಂಕಟೇಶ್,ರಾಜಶ್ವ ನಿರೀಕ್ಷಕ ಮಾದೇಶ್,ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಅರಣ್ಯ ಇಲಾಖೆಯ ಅಧಿಕಾರಿಗಳು ಪೋಲಿಸ್ ಇಲಾಖೆಯ ಅಧಿಕಾರಿಗಳು, ಸೇರಿದಂತೆ ಹನೂರು ತಾಲೂಕಿನ ರೈತ ಸಂಘಟನೆಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ