ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಣಕಾಸು ಇಲಾಖೆಯ ಅನುಮತಿ ಪಡೆದು ತಜ್ಞ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿಗೆ ಪ್ರಯತ್ನ:ಸಚಿವ ಡಾ.ಶರಣಪ್ರಕಾಶ ಪಾಟೀಲ

ಯಾದಗಿರಿ ಜಿಲ್ಲಾಸ್ಪತ್ರೆಗೆ ಅವಶ್ಯಕತೆ ಇರುವ ತಜ್ಞ ವೈದ್ಯರು,ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಣಕಾಸು ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಈ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ತಿಳಿಸಿದರು.
ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಅವರ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವೈದ್ಯಕೀಯ ತಜ್ಞರ ಕೊರತೆ ಇದೆ. ಚುನಾವಣೆ,ಕೋವಿಡ್ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ನೇಮಕಾತಿಯಲ್ಲಿ ಸ್ವಲ್ಪ ವಿಳಂಬವಾಗಿದೆ. ಆದಕಾರಣ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದೊಂದಿಗೆ ರಾಜ್ಯ ಹಣಕಾಸು ಇಲಾಖೆಯ ಮೂಲಕ ಚರ್ಚಿಸಿ ಅನುಮತಿ ಪಡೆದು ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಬಡ ಜನರಿಗೆ ಅವಶ್ಯಕ ವೈದ್ಯಕೀಯ ಸೇವಾ ಸೌಲಭ್ಯ ದೊರಕಬೇಕು ಎಂಬ ಉದ್ದೇಶದೊಂದಿಗೆ ವೈದ್ಯಕೀಯ ಕಾಲೇಜು ಆರಂಭಿಸಿದ್ದು, ಇದು ಜಿಲ್ಲಾ ಆಸ್ಪತ್ರೆಯ ಪ್ರಗತಿ ಮತ್ತು ಸುಧಾರಣೆಗೂ ಅನುಕೂಲವಾಗಲೆಂಬ ಉದ್ದೇಶದಿಂದ ಆರಂಭಿಸಲಾಗಿದೆ.
ಅದರಂತೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಇಲ್ಲಿ ದೊರೆಯುವಂತಾಗಬೇಕು. ಬಡವರಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯಬೇಕು.ಜಿಲ್ಲಾ ಆಸ್ಪತ್ರೆ ಈ ಭಾಗದ ಬಡಜನರಿಗೆ ಸಹಕಾರಿಯಾಗಿದ್ದು, ಬಡ ಮಕ್ಕಳಿಗೆ ಉನ್ನತ ಶಿಕ್ಷಣದ ಸವಲತ್ತು ದೊರಕಿಸಲು ವೈದ್ಯಕೀಯ ಕಾಲೇಜು ಹೆಚ್ಚಿನ ನೆರವಾಗಿದೆ. ಸದ್ಯ ಸಭೆಯಲ್ಲಿ ತಜ್ಞ ವೈದ್ಯರು, ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ಕೊರತೆ ಇರುವ ಬಗ್ಗೆ ಅಧಿಕಾರಿಗಳು ಗಮನಕ್ಕೆ ತಂದಿದ್ದು, ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಧ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗಳ ಸಮನ್ವಯತೆಯಿಂದ ವೈದ್ಯರ ಸೇವೆ ಪಡೆಯಲಾಗುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಕಾಲೇಜ್ ನ ನೇಮಕಾತಿಗೆ ಸಂಬಂಧಪಟ್ಟಂತೆ ಎನ್. ಎಂ. ಸಿ ಮಾನದಂಡಗಳ ಅನ್ವಯ ಪ್ರತಿ ವರ್ಷ ನೇಮಕಾತಿಗಳು ನಡೆಯುತ್ತಿವೆ. ಅರ್ಥೋಪೆಡಿಸಿಯನ್ ಇದ್ದು,ಮುಂದಿನ ದಿನಗಳಲ್ಲಿ ಗುಲ್ಬರ್ಗಾ ಟ್ರಾಮಾ ಸೆಂಟರದಲ್ಲಿ ನೇಮಕಾತಿಗೆ ಬರುವವವರನ್ನು ಯಾದಗಿರಿಗೆ ಕಳುಹಿಸಲು ಪ್ರಯತ್ನಿಸಲಾಗುವುದೆಂದು ಹೇಳಿದರು.

ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸೇವಾ ತತ್ಪರತೆ ಹೆಚ್ಚಿಸಲು ಅನುಕೂಲವಾಗುವಂತೆ ಮಧ್ಯಾಹ್ನದ ಸಮಯದಲ್ಲಿ ಯಾರು ಪ್ರಾಕ್ಟೀಸ್ ಮಾಡುವಂತಿಲ್ಲ ಎಂಬ ಸುತ್ತೋಲೆ ಒಂದನ್ನು ಹೊರಡಿಸುವಂತೆ ವೈದ್ಯಕೀಯವಿಜ್ಞಾನ ಸಂಸ್ಥೆಗಳ ನಿರ್ದೇಶಕರಿಗೆ ತಿಳಿಸಿದ ಅವರು ಕಡ್ಡಾಯವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಅದರಂತೆ ಜಿಲ್ಲಾ ಆಸ್ಪತ್ರೆಯಲ್ಲಿಯೂ ಕೂಡ ಬಡ ರೋಗಿಗಳಿಗೆ ಸಕಾಲಕ್ಕೆ ಸ್ಪಂಧಿಸಲು ಅನುಕೂಲವಾಗುವಂತೆ ಎಲ್ಲಾ ಸಿಬ್ಬಂದಿಗಳ ಸೇವೆ ಅತ್ಯುತ್ತಮವಾಗಿರಬೇಕು. ಕಡ್ಡಾಯವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಅವರು ಕ್ರಿಟಿಕಲ್ ಕೇರ್ ಸೆಂಟರ್ ಗೆ ಅವಶ್ಯಕತೆ ಇರುವ ಎಂ. ಆರ್. ಐ ಕೊರತೆ ನೀಗಿಸಲು ಸಹ ಪ್ರಯತ್ನಿಸಲಾಗುವುದೆಂದು ತಿಳಿಸಿದರು.
ಯಾದಗಿರಿಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ಕಟ್ಟಡ ಅತ್ಯುತ್ತಮವಾಗಿ ನಿರ್ಮಾಣವಾಗಿದೆ. ಜಿಲ್ಲಾ ಆಸ್ಪತ್ರೆಯ ಕೆಲವು ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ,ಕ್ರಿಟಿಕಲ್ ಕೇರ್ ಸೆಂಟರ್ ಶೇ. 70 ರಷ್ಟು ಪೂರ್ಣಗೊಳಿಸಲಾಗಿದೆ. ಅದರಂತೆ ವೈದ್ಯಕೀಯ ಕಾಲೇಜಿಗೆ ಸಂಬಂಧಪಟ್ಟಂತೆ ಕೆಲವು ಕಾಮಗಾರಿಗಳನ್ನು ಮುಂಬರುವ ಮೂರು ತಿಂಗಳಗಳಲ್ಲಿ ಪೂರ್ಣಗೊಳಿಸಲು ತಿಳಿಸಿದರು.
ರಾಜ್ಯದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿನಿತ್ಯ ಜ್ವರ ಪ್ರಕರಣಗಳ ನಿರ್ವಹಣೆ ಮಾಡುವಂತೆ ಯು ಮತ್ತು ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ಸಹ ನೀಡಲಾಗಿದ್ದು ಸ್ವಚ್ಛತೆ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲು ತಿಳಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ಪರಿಶೀಲನೆ: ಇದೇ ಸಂದರ್ಭದಲ್ಲಿ ಸಚಿವರು ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಕೇಂದ್ರ ಪ್ರಯೋಗಾಲಯ ಉದ್ಘಾಟಿಸಿದ ಅವರು ಲ್ಯಾಬ್ ಪರಿಶೀಲನೆ, ರಕ್ತ ಶೇಖರಣೆ ಕೊಠಡಿ, ಸಾಮಾನ್ಯ ವೈದ್ಯಕೀಯ ವಿಭಾಗ, ಸಿಟಿ ಸ್ಕ್ಯಾನ್ ವಿಭಾಗ, ತುರ್ತು ಚಿಕಿತ್ಸಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ, ಕರ್ತವ್ಯದಲ್ಲಿರುವ ವೈದ್ಯರ ಬಗ್ಗೆ ಹಾಗೂ ರೋಗಿಗಳ ಆರೋಗ್ಯ ವಿಚಾರಿಸಿದರು.

ಇದೇ ವೇಳೆ ಐಟಿಐ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪೂರ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಸುಜಾತಾ ರಾಠೋಡ್, ಜಿಲ್ಲಾ ಶಸ್ತ್ರಚಿಕಿತ್ಸಕಿ ರಿಜ್ವಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹನುಮಂತ ಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ .

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ