ಚಿತ್ತಾಪುರ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯಡಿಯಲ್ಲಿ ಹೆಸರು ಬೆಳೆಗೆ ಜುಲೈ 15 ಹಾಗೂ ಉದ್ದು, ತೊಗರಿ ಮತ್ತು ಇತರೆ ಬೆಳೆಗಳಿಗೆ ವಿಮಾ ನೋಂದಣಿಗೆ ಜುಲೈ 31 ಕೊನೆ ದಿನವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಅಥವಾ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡದಿಂದ ಬೆಳೆ ನಷ್ಟವುಂಟಾದರೆ ವಿಮೆ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ವಿಮಾ ಯೋಜನೆಯಡಿ ರೈತರು ತಮ್ಮ ಪಾಲಿನ ಕಂತು ಪ್ರತಿ ಎಕರೆಗೆ ಹೆಸರು ರೂ.293.31 ವಿಮಾ ಕಂತು ಜುಲೈ 15ರೊಳಗೆ ಪಾವತಿಸಬೇಕು, ಉದ್ದು ರೂ. 264.11 ತೊಗರಿ ರೂ. 388.51 ಸೋಯಾಬಿನ್ ರೂ. 1,006.69 ಹತ್ತಿ 1,303 ವಿಮಾ ಕಂತು ಪವತಿಗೆ ಜುಲೈ 31 ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ. ರೈತರು ಹೆಚ್ಚಿನ ಮಾಹಿತಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ನೋಂದಣಿಗಾಗಿ ಹತ್ತಿರದ ಬ್ಯಾಂಕ್ ಗಾಳಿಗೆ ನಾಗರಿಕ ಸೇವಾ ಕೇಂದ್ರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ