ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹೇಮ-ವೇಮನ ಸದ್ಬೋಧನ ಪೀಠದ ವಾರ್ಷಿಕೋತ್ಸವ,ಪ್ರತಿಭಾವಂತ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ವಿಜಯಪುರ-ಇಂದು ಮೌಲ್ಯಯುತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಾಣದ ಅವಶ್ಯಕತೆಯಿದ್ದು, ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠ ಹಾಗೂ ನಗರದ ಹಿರಿಯ ವಕೀಲ ಎಚ್.ಬಿ.ಶಿರೋಳ ಕುಟುಂಬದ ಆಶ್ರಯದಲ್ಲಿ ಭಾನುವಾರ ಪ್ಲೀಜನ್ ಸ್ಟೇ ಹೋಟೆಲ್ ಸಭಾಭವನದಲ್ಲಿ ಜರುಗಿದ ಹೇಮ-ವೇಮನ ಸದ್ಬೋಧನ ಪೀಠದ ವಾರ್ಷಿಕೋತ್ಸವ, ಪ್ರತಿಭಾವಂತ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಆದರ್ಶ ಬದುಕು ಹಾಗೂ ಮಹಾಯೋಗಿ ವೇಮನರ ತತ್ವ ಚಿಂತನೆಗಳನ್ನು ಮನೆ ಮನಗಳಿಗೆ ತಲುಪಿಸಿ ಸಮಾಜದಲ್ಲಿ ಪರಿವರ್ತನೆ ತರುವ ಉದ್ದೇಶ ಮತ್ತು ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅವರ ಕಲಿಕೆಗೆ ನೆರವಾಗುವ ಪುಣ್ಯದ ಕಾರ್ಯ ಮಾಡುವ ಮೂಲಕ ಹೇಮ-ವೇಮನ ಸದ್ಬೋಧನ ಪೀಠ ಸಮಾಜಕ್ಕೆ ಮಾದರಿಯಾಗಿದೆ ಎಂದ ಗೌಡಪ್ಪಗೋಳ, ಪೀಠದ ಕಾರ್ಯಕ್ಕೆ ರಡ್ಡಿ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಹೇಳಿದರು.
ಉಪನ್ಯಾಸ ನೀಡಿದ ಹಿರಿಯ ಸಾಹಿತಿ ಬಿ.ಆರ್.ಪೋಲಿಸ್ ಪಾಟೀಲ, ಯಾರು ಸಮಾಜದ ಹಿತಕ್ಕಾಗಿ ಬದುಕಿ ಬಾಳಿರುತ್ತಾರೋ ಅವರು ಅಳಿದ ನಂತರವೂ ಜನಮಾನಸದ ಸ್ಮರಣೆಯಲ್ಲಿರುತ್ತಾರೆ. ಎಲ್ಲರಂತೆ ಸಾಮಾನ್ಯ ವ್ಯಕ್ತಿಗಳಾಗಿ ಆದರ್ಶದ ಬದುಕು ಬಾಳಿ ಜಗತ್ತಿಗೆ ಬೆಳಕಿನ ದಾರಿ ತೋರಿದ ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನರು ಇಂದು ಪೂಜ್ಯನೀಯ ಸ್ಥಾನದಲ್ಲಿ ನಿಂತಿದ್ದಾರೆ.ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಜಯಪುರ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಸುರೇಶ ದೇಸಾಯಿ(ಕಲಕೇರಿ) ಮಾತನಾಡಿ, ಹೇಮ ವೇಮನ ಸದ್ಬೋಧನ ಪೀಠದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಪ್ರಶಂಸನೀಯ. ಬಡ ಮಕ್ಕಳ ಶಿಕ್ಷಣಕ್ಕಾಗಿ ನೆರವಾಗುವ ಈ ಕಾರ್ಯ ದೊಡ್ಡ ಪುಣ್ಯದ ಕೆಲಸ. ಇದರ ಪ್ರೇರಣೆಯಿಂದ ನಮ್ಮ ಸಂಸ್ಥೆಯೂ ವಿದ್ಯಾರ್ಥಿಗಳನ್ನು ದತ್ತು ಪಡೆಯುತ್ತಿದೆ ಎಂದು ಹೇಳಿದರು.
ಜೇವರ್ಗಿಯ ಸಿದ್ಧಬಸವ ಕಬೀರಾನಂದ ಸ್ವಾಮಿಗಳು ಮತ್ತು ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಮಾತನಾಡಿ, ಬಡ ಪ್ರತಿಭಾವಂತ ಮಕ್ಕಳನ್ನು ದತ್ತು ಪಡೆದು ಅವರ ಓದಿಗೆ ಸಹಾಯ ಮಾಡುವ ಪುಣ್ಯದ ಕಾರ್ಯ ಕೈಗೊಂಡಿರುವ ಸದ್ಬೋಧನ ಪೀಠಕ್ಕೆ ಇಡೀ ಸಮಾಜದ ಸಹಕಾರವಿರಲಿ ಎಂದರು.
ಕಾರ್ಯಕ್ರಮದಲ್ಲಿ ಇಬ್ಬರೂ ಪಿಯುಸಿ ಹಾಗೂ ಇಬ್ಬರು ಬಿಇ ಪ್ರವೇಶ ಪಡೆದ ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲಾಯಿತಲ್ಲದೇ, ಕಳೆದ ವರ್ಷ ದತ್ತು ಪಡೆದಿರುವ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಯಿತು. ರೆಡ್ಡಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು.
ಎರೆಹೊಸಳ್ಳಿಯ ವೇಮನ ಸಂಸ್ಥಾನಮಠದ ರಡ್ಡಿ ಗುರುಪೀಠದ ಶ್ರೀ ವೇಮನಾನಂದ ಮಹಾಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಎಚ್.ಬಿ.ಶಿರೋಳ, ಶಾರದಾ ಶಿರೋಳ, ಎಸ್.ಟಿ.ಪಾಟೀಲ, ಬಸವರಾಜ ಯಾಳಗಿ, ಹನಮಂತಗೌಡ ಪಾಟೀಲ(ಪಡಗಾನೂರ), ಆನಂದ ಶಿರೋಳ, ಶೈಲಾ ಶಿರೋಳ, ಸಂಗಪ್ಪ ಹುಣಸೀಕಟ್ಟಿ, ಕಾಶೀನಾಥ ಸಾಹುಕಾರ, ಡಿ.ಪಿ.ಅಮಲಝರಿ, ಮಹಾದೇವ ಪಾಟೀಲ, ಸದ್ಬೋಧನ ಪೀಠದ ನಿರ್ದೇಶಕ ರಂಗಣ್ಣ ಕಟಗೇರಿ, ರಮೇಶ ಅಣ್ಣಿಗೇರಿ, ಎಚ್.ಜಿ.ಹುದ್ದಾರ, ಡಿ.ಎಂ.ಬೆಣ್ಣೂರ, ವಿನಾಯಕ ಪಾಟೀಲ, ಈಶ್ವರ ಕೋನಪ್ಪನವರ, ಕೃಷ್ಣಾ ಯಡಹಳ್ಳಿ, ಸಿದ್ದಣ್ಣ ಮೆಳ್ಳಿಗೇರಿ, ಸಿ.ಎನ್.ಬಾಳಕ್ಕನವರ, ಮಾಲತೇಶ ಅಮಾತೆಪ್ಪನವರ, ಪೀಠದ ಕಾರ್ಯದರ್ಶಿ ಟಿ.ಎಚ್.ಸನ್ನಪ್ಪನವರ ಇದ್ದರು.
ಬೆನಕಟ್ಟಿಯ ಹೇಮರಡ್ಡಿ ಮಲ್ಲಮ್ಮ ಭಜನಾ ತಂಡದವರು ವೇಮನರ ವಚನ ಪ್ರಸ್ತುತಪಡಿಸಿದರು. ಇಂದಿರಾ ಬಿದರಿ ಸ್ವಾಗತಿಸಿದರು. ಅಜಿತಗೌಡ ಪಾಟೀಲ ನಿರೂಪಿಸಿದರು. ಶ್ರೀನಿವಾಸ ಬೆನಕಟ್ಟಿ ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ