ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡೆಕಲ್ ಹೋಬಳಿಯ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಶಿವಶಶರಣ ಕಟ್ಟಿಮನಿ (47) ಅವರು ಭಾನುವಾರ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸಂಸ್ಕಾರ ಸ್ವಗ್ರಾಮ ಕೊಡೇಕಲ್ಲ ನಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಸಂತಾಪ:
ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಇಂದೂಧರ ಸಿನ್ನೂರ್ ಅವರು ಸಂತಾಪ ಸೂಚಿಸಿ ಮೃತರ ಕುಟುಂಬದ ಸದಸ್ಯರರಿಗೆ ದುಖಃ ಭರಿಸಲು ಶಕ್ತಿ ದೇವರು ನೀಡಲಿ ಹಾಗೂ ಮೃತರ ಆತ್ಮ ಶಾಂತಿ ನೀಡಲಿ ಎಂದು ತಿಳಿಸಿದ್ದಾರೆ.
ವರದಿ: ಶಿವರಾಜ ಸಾಹುಕಾರ್ ವಡಗೇರಾ




















