ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಯಿಗಾಗಿ ಒಂದು ಗಿಡ ಅಭಿಯಾನಕ್ಕೆ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ ಅಮರೇಗೌಡ ಮಲ್ಲಾಪೂರ ಚಾಲನೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ವೀರಶೈವ ಸಮಾಜದ ರುದ್ರಭೂಮಿಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮಲ್ಲಿಕಾರ್ಜುನ ಪಾಟೀಲ ಮಾಜಿ ಅಧ್ಯಕ್ಷರು ನಗರ ಸಭೆ ಇವರ ಅಧ್ಯಕ್ಷತೆಯಲ್ಲಿ ತಾಯಿಗಳ ಸವಿ ನೆನಪಿಗಾಗಿ “ತಾಯಿಗಾಗಿ ಒಂದು ಗಿಡ ನೆಡುವ ಅಭಿಯಾನ” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ 40 ಸಸಿಗಳನ್ನು ನೆಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಪ್ರತಿಯೊಬ್ಬರೂ ತಂದೆ ತಾಯಿಗಳ ಸವಿನೆನಪಿಗಾಗಿ ಒಂದೊಂದು ಗಿಡನೆಟ್ಟು ಪಾಲನೆ ಪೋಷಣೆ ಮಾಡಬೇಕು.ಅವರ ನೆನಪುಗಳು ನಮ್ಮ ಮುಂದಿನ ಪೀಳಿಗೆಗೆ ಉಳಿಯುತ್ತವೆ.ಹಿಂದೆ ತಂದೆ ತಾಯಿ ನೆಟ್ಟು ಬೆಳಸಿದ ಗಿಡ ಇಂದು ಹೆಮ್ಮರವಾಗಿ ಬೆಳೆದು ನಮಗೆ ಶುದ್ಧವಾದ ಗಾಳಿ ಮತ್ತು ನೆರಳನ್ನು ನೀಡುತ್ತಿವೆ ಇದು ನಮ್ಮ ಪೂರ್ವಜರು ಮಾಡಿದ ಪುಣ್ಯದ ಕಾರ್ಯ ಎಂಬುದು ಎಲ್ಲರಿಗೂ ತಿಳಿಯುತ್ತದೆ ಆದ್ದರಿಂದ ಪ್ರತಿಯೊಬ್ಬರೂ ತಮ್ಮ ತಂದೆ ತಾಯಿಗಾಗಿ ಒಂದೊಂದು ಗಿಡ ನೆಟ್ಟು ಪರಿಸರವನ್ನು ಸಂರಕ್ಷಣೆ ಮಾಡಲು ಮುಂದಾಗಬೇಕು ದೇಶದ ಪ್ರಧಾನಮಂತ್ರಿಗಳು ಕೂಡ ತಂದೆ ತಾಯಿಗಳು ಸವಿ ನೆನಪಿಗಾಗಿ ಏಕ್ ಪೇಡ್ ಮಾ ಕೆ ನಾಮ್ (ತಾಯಿಗಾಗಿ ಒಂದು ಗಿಡ) ನೆಡುವ ಅಭಿಯಾನಕ್ಕೆ ಕರೆ ನೀಡಿರುವುದು ಸ್ವಾಗತಾರ್ಹ ಈ ಹಿನ್ನಲೆಯಲ್ಲಿ ಇಂದು ವನಸಿರಿ ಫೌಂಡೇಶನ್ ತಂಡದಿಂದ ಕೂಡ ತಾಯಿಗಾಗಿ ಒಂದೊಂದು ಗಿಡ ನೆಡುವ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪೂರ,ಶರಣಪ್ಪ ತೆಂಗಿನಕಾಯಿ(ಮಾಜಿ ನಗರಸಭೆ ಅಧ್ಯಕ್ಷರು), ಮಲ್ಲಿಕಾರ್ಜುನ ಪೋಲಿಸ್ ಪಾಟೀಲ(ಮಾಜಿ ನಗರಸಭೆ ಅಧ್ಯಕ್ಷರು),ದೊಡ್ಡಯ್ಯ ದೊದ್ದಿನ್,ಧರ್ಮಸ್ಥಳ ಸಂಘದ ಅಧಿಕಾರ ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ಅಮರೇಶ ಶಿಕ್ಷಕರು ತಿಮ್ಮಾಪೂರ,ಚನ್ನಪ್ಪ ಕೆ.ಹೊಸಹಳ್ಳಿ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!