ದಾವಣಗೆರೆ:ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಾ ಪಾಟೀಲ್ ಪತಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್‌ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್ ಮೃತಪಟ್ಟಿದ್ದಾರೆ.
