ಕೊಟ್ಟೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, 03 ಶೈಕ್ಷಣಿಕ ಜಿಲ್ಲೆ ಹಾಗು 183 ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6.00 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿದ್ದು, ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ. ಸರ್ಕಾರದ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನೌಕರರ ಸಂಘದ ಕಾರ್ಯದರ್ಶಿ ಸಿದ್ದಪ್ಪನವರು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಜಗದೀಶ ಇವರು
1) ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಆದೇಶ ಹೊರಡಿಸಬೇಕು.
2) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದು.
3) ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ(ಕೆಎಎಸ್ಎಸ್) ಅನುಷ್ಠಾನಗೊಳಿಸುವುದು.
ಈ 3 ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಿಗೆ ಹಾಗೂ ತಹಶೀಲ್ದಾರರಾದ ಅಮರೇಶ ಜಿ ಕೆ ಇವರಿಗೆ ಮನವಿಯನ್ನು ಸಲ್ಲಿಸಿದರು.
ಈ ಸಮಯದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಖಜಾಂಚಿ ಬಸವರಾಜ, ಉಪಾಧ್ಯಕ್ಷರಾದ ಎಸ್.ಎಂ.ಗುರುಬಸವರಾಜ, ಬಸವರಾಜ ಎಸ್ಎಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ- ಡಿ ಸಿದ್ದಪ್ಪ, ಕಾರ್ಯದರ್ಶಿ ಬಾಲಚಂದ್ರ ಜಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಜ್ಯೋತಿಬಾಯಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ- ನಾಗೇಶ್, ಸಂಘಟನಾ ಕಾರ್ಯದರ್ಶಿ- ರೇವಣಸಿದ್ದಪ್ಪ, ಮುತ್ತೇಶ್, ಸದಸ್ಯರಾದ ವಿನಯಕುಮಾರ್, ಎಂ ಶಿವಕುಮಾರ, ಕೆ.ಪುಷ್ಪಲತಾ,ತಾಲೂಕ ಕಛೇರಿಯ ಸಿಬ್ಬಂದಿಯವರು ಭಾಗವಹಿಸಿದ್ದರು.