ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು ಮತ್ತು ಓವರ್ ಹೆಡ್ ಟ್ಯಾಂಕ್ ನೀರನ್ನ ಬ್ಲೀಚಿಂಗ್ ಪೌಡರ್ ನಿಂದ ಸ್ವಚ್ಛಗೊಳಿಸಿ ಕುಡಿಯಲು ಯೋಗ್ಯವಾದ ನೀರನ್ನು ತುಂಬಿಸಬೇಕು ಎಂದು ಜೆಡಿಎಸ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಸರ್ಕಾರಕ್ಕೆ ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಾದ್ಯಂತ ಹೆಚ್ಚುತ್ತಿರುವ ಡೆಂಗ್ಯೂ, ಮಲೇರಿಯಾ ರೋಗಗಳಿಗೆ ಮಹಿಳೆಯರು, ಮಕ್ಕಳು, ವೃದ್ಧರು ಬಹು ಬೇಗನೆ ಈ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಅಲ್ಲದೆ ರೋಗಕ್ಕೆ ತುತ್ತಾದವರ ಸಾಕಷ್ಟು ಪ್ರಕರಣಗಳು ಗಣನೀಯವಾಗಿ ದಾಖಲಾಗುತ್ತಿವೆ.ಈಗ ಮಳೆಗಾಲವೂ ಆಗಿರುವುದರಿಂದ ನೀರು ಸಂಗ್ರಹವಾಗುವ ಸಾಧ್ಯತೆ ಹೆಚ್ಚು ಇರುವುದರಿಂದ ರೋಗಗಳು ಹರಡಲು ತುಂಬಾ ಅನುಕೂಲಕರವಾಗಿದೆ, ಹಾಗಾಗಿ ಈ ರೋಗಗಳಿಗೆ ಕಾರಣವಾದ ಕೊಳಚೆ ನೀರು ನಿಲ್ಲುವ ಸ್ಥಳ, ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಚಗೊಳಿಸಬೇಕು ಮತ್ತು ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.