ಶಿವಮೊಗ್ಗ: ಆಶ್ರಯ ಸಮಿತಿಯ ಸಭೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ರಿವರ್ ಫ್ರಂಟ್ ಯೋಜನೆಗಾಗಿ ತಮ್ಮ ಜಾಗಗಳನ್ನು ನೀಡಿದ ಮಂಡಕ್ಕಿ ಭಟ್ಟಿಯ ನಿವಾಸಿಗಳಿಗೆ ಪ್ರಧಾನ ಮಂತ್ರಿ ಆಶ್ರಯ ಯೋಜನೆ ಅಡಿಯಲ್ಲಿ ಶಿವಮೊಗ್ಗ ನಗರದ ಗೋವಿಂದಪುರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಚೀಟಿ ಎತ್ತುವ ಮೂಲಕ ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಒಟ್ಟಾರೆ 58 ಫಲಾನುಭವಿಗಳಿಗೆ ಈ ಯೋಜನೆಯಡಿಯಲ್ಲಿ ಮನೆಯಲ್ಲಿ ವಿತರಿಸಲಾಗಿದ್ದು, ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಆಶ್ರಯ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ