ಶಿವಮೊಗ್ಗ:ಜುಲೈ 12 ರಂದು ಮಧ್ಯಾಹ್ನ 12.00ಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣರವರು ಜಿಲ್ಲೆಯ ಎಲ್ಲಾ ತಾಲೂಕುಗಳ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರ ಅಹವಾಲು ಹಾಗೂ ದೂರುಗಳನ್ನು ಸ್ವೀಕರಿಸಿ ಪರಿಶೀಲಿಸುತ್ತಿದ್ದು ಜಿಲ್ಲೆಯ ಅನಿವಾಸಿ ಕನ್ನಡಿಗರು ಇದರ ಸದುಪಯೋಗ ಪಡೆದುಕೊಂಡು, ತಮ್ಮ ಅಹವಾಲು/ದೂರುಗಳನ್ನು ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ