ವಿಜಯನಗರ/ಕೊಟ್ಟೂರು:ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಮುಖ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು,ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರ ಸಹಯೋಗದೊಂದಿಗೆ ಡೆಂಗ್ಯೂ ಚಿಕನ್ ಗುನ್ಯಾ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಪ ಪಂ ಮುಖ್ಯಾಧಿಕಾರಿ ಎ ನಸ್ಸರುಲ್ಲಾ ಮಾತನಾಡಿ ಡೆಂಗ್ಯೂ ಒಂದು ಮಾರಣಾಂತಿಕ ರೋಗವಾಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ತುಂಬಾ ಅವಶ್ಯಕತೆ ಇರುತ್ತದೆ ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಮನೆಗಳಲ್ಲಿ ವಾರಕ್ಕಿಂತ ಹೆಚ್ಚಾಗಿ ನೀರನ್ನು ಸಂಗ್ರಹಿಸಬಾರದು, ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಬಿಸಾಡಿದ ಪ್ಲಾಸ್ಟಿಕ್ ವಸ್ತುಗಳು, ಟೈರ್ಗಳು ಒಡೆದ ತೆಂಗಿನ ಚಿಪ್ಗಳನ್ನು ವಿಲೇವಾರಿ ಮಾಡಬೇಕು ಸೊಳ್ಳೆಪರದೆ ಮತ್ತು ಸೊಳ್ಳೆ ನಿರೋಧಕಗಳನ್ನು ಬಳಸಬೇಕು,ತೀವ್ರ ಜ್ವರ ಇತರೆ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು ಎಂದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.