ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರು ಅಭಿವೃದ್ಧಿ ಅಧಿಕಾರಿ ಹಾಗೂ ಉಪಾಧ್ಯಕ್ಷರು ಮತ್ತು ಸರ್ವಸದಸ್ಯರು ಜೊತೆಗೆ ಸಿಬ್ಬಂದಿ ಕಂಕಣ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಹಾಗೆ ಪ್ರತಿ ಸದಸ್ಯರು ವೈಯಕ್ತಿಕವಾಗಿ ಕಾಳಜಿಯಿಂದ ಜನರ ಆರೋಗ್ಯದ ದೃಷ್ಟಿಯಿಂದ ಗ್ರಾಮದ ಪ್ರತಿ ವಾರ್ಡ್ ನಲ್ಲಿ ಫಾಗಿಂಗ್ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಣ ಮಾಡಿ ಜನರ ಆರೋಗ್ಯ ಕಾಪಾಡಲು ಶ್ರಮ ವಹಿಸುತ್ತಿದ್ದಾರೆ.ಜೊತೆಗೆ ನೀರಿನ ಸಮಸ್ಯೆ ಇರುವ ವಾರ್ಡ್ ಗಳಿಗೆ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದರಿಂದ ಸಾರ್ವಜನಿಕರು ನಿಟ್ಟುಸಿರುಬಿಟ್ಟಿದ್ದಾರೆ ಎಂದು ಗ್ರಾಮ ಪಂಚಾಯತ್ ಸಿಬ್ಬಂದಿ ರಂಗನಾಥ ಟ್ಯಾಪ್ಲಿ ತಿಳಿಸಿದ್ದಾರೆ.
ವರದಿ ಶರಣು ಹುಣಸಗಿ