ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ತಾಲ್ಲೂಕಿನ ಜನತೆ ಕಾದು ನೋಡುತ್ತಿದ್ದ ಕುಡಿಯುವ ನೀರು ಕೆಲವೇ ಕೆಲವು ದಿನಗಳಲ್ಲಿ ಪಾವಗಡ ತಲುಪಲಿದೆ,
ಈ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ರವರು ತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಬೆಳ್ಳಿಬಟ್ಟಲು ಮತ್ತು ಕಾರನಾಗನಹಟ್ಟಿ ಮಧ್ಯದಲ್ಲಿ ನಿರ್ಮಾಣವಾಗಿರುವ ಸುಮಾರು 13 ಲಕ್ಷ ಲೀಟರ್ ಸಾಮರ್ಥ್ಯದ ತುಂಗಭದ್ರಾ ಕುಡಿಯುವ ನೀರಿನ ಟ್ಯಾಂಕ್ ಬಳಿಗೆ ತೆರಳಿ ಕಾಮಗಾರಿ ಪರಿಶೀಲನೆ ನಡೆಸಿದರು ತುಂಗಾ ಭದ್ರೆಯಿಂದ ನೀರು ಸರಬರಾಜು ಮಾಡಲು ಪೈಪ್ ಲೈನ್ ಮಾಡಿರುವುದನ್ನು ನಕ್ಷೆಯ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು, ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಹಾಜರಿದ್ದರು.