ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಗರ ಠಾಣೆ, ಗ್ರಾಮಾಂತರ ಠಾಣೆ ಮತ್ತು ಮಂಚೇನಹಳ್ಳಿ ಪೊಲೀಸ್ ಠಾಣೆಗಳಿಗೆ ಮಂಗಳವಾರ ಎಸ್ ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿದ ಸಮಯದಲ್ಲಿ ಠಾಣೆಗೆ ಬಂದಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ,3 ಠಾಣೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗಿದೆ ಎಂದರು.
ಬೀಟ್ ಗಳನ್ನು ಹೆಚ್ಚಾಗಿ ಮಾಡಲಾಗುವುದು, ಮತ್ತು ಠಾಣೆಗೆ ಯಾವುದೇ ದೂರು ಬಂದರೂ ಅವರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು ಎಂದು ತಿಳಿಸಿದರು.
ಸಿಗ್ನಲ್ ಗಳಲ್ಲಿ ಈಗಾಗಲೇ ಪೊಲೀಸರನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕರಿಗೆ ಸಿಗ್ನಲ್ ಜಂಪ್, ತ್ರಿಬಲ್ ರೈಡ್, ಸೀಟ್ ಬೆಲ್ಟ್, ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ ಮಾಡದಂತೆ ಅರಿವು ಮೂಡಿಸುವ ಕಾರ್ಯಕ್ರಮಗಳು ಮಾಡಲಾಗುತ್ತದೆ. ಸಾರ್ವಜನಿಕರು ನಿಯಮವನ್ನು ಪಾಲಿಸಿದಾಗ ಮಾತ್ರ ಅಪಘಾತಗಳು ಸಾವು ನೋವುಗಳು ಸಂಭವಿಸುವುದಿಲ್ಲ ಮತ್ತು ದಂಡ ವಿಧಿಸುವುದಿಲ್ಲ ಸ್ಪಂದಿಸದಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.
ಸಾರ್ವಜನಿಕರು,ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದಾಗ ಮಾತ್ರ ಕಾನೂನು ವ್ಯವಸ್ಥೆ ಕಾಪಾಡಬಹುದು ಎಂದರು.
ಇದೇ ವೇಳೆ ವೃತ್ತ ನಿರೀಕ್ಷಕ ಕೆ ಪಿ ಸತ್ಯನಾರಾಯಣ, ಗ್ರಾಮಾಂತರ ಠಾಣೆಯ ಪಿಎಸ್ಐ ರಮೇಶ್ ಗುಗ್ಗರಿ, ಪಿಎಸ್ಐ ಲಲಿತಮ್ಮ, ನಗರ ಠಾಣೆಯ ಪಿಎಸ್ಐ ಗೋಪಾಲ್, ಸಿಬ್ಬಂದಿಗಳು ಹಾಜರಿದ್ದರು.
ಮಂಜುನಾಥ್ ಎಸ್ ತಾಲ್ಲೂಕು ವರದಿಗಾರ