ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಸೌರಶಕ್ತಿಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ:ಅಣ್ಣಾರಾವ ಪಾಟೀಲ್

ಚಿತ್ತಾಪುರ:ನವೀಕರಿಸಬಹುದಾದ ಇಂಧನದ ಮೂಲಗಳಲ್ಲಿ ಸೌರಶಕ್ತಿ ಅತ್ಯಂತ ಪ್ರಮುಖವಾದದ್ದು. ಹೆಚ್ಚಿನ ಸೌರಶಕ್ತಿಯ ಬಳಕೆಯಿಂದ ಪೆಟ್ರೋಲಿಯಮ್ ಮತ್ತು ಕಲ್ಲಿದ್ದಲಿನಂತಹ ಮುಗಿದು ಹೋಗುವ ಸಂಪನ್ಮೂಲಗಳ ಬಳಕೆ ಕಡಿಮೆ ಮಾಡಬಹುದು. ಇದರಿಂದ ನಾವು ಸಾಕಷ್ಟು ಸಂಪನ್ಮೂಲವನ್ನು ಉಳಿತಾಯ ಮಾಡಬಹುದು ಎಂದು ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದ ಉಪನ್ಯಾಸಕ ಅಣ್ಣಾರಾವ ಪಾಟೀಲ ಹೇಳಿದರು.ಅವರು ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಸೌರಶಕ್ತಿಯ ಅವಶ್ಯಕತೆ ಕುರಿತು ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಗರ ಪ್ರದೇಶಗಳಲ್ಲಿ ಸೌರಶಕ್ತಿಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡುತ್ತಿದೆ ಆದರೆ ಗ್ರಾಮೀಣ ಭಾಗದಲ್ಲಿ ಇದರ ಬಗ್ಗೆ ಹೆಚ್ಚಿನ ಅರಿವು ಮೂಡಬೇಕಾಗಿದೆ ಕೇಂದ್ರ ಸರಕಾರ ನಾವಿಕರಿಸಬಹುದಾದ ಸಂಪನ್ಮೂಲಗಳ ಬಳಕೆಗೆ ಉತ್ತೇಜನ ನೀಡುತ್ತಿದೆ ಭವಿಷ್ಯದಲ್ಲಿ ಸೌರಾಶಕ್ತಿಯೇ ಎಲ್ಲರ ಆಶಾಕಿರಣವಾಗಲಿದೆ ಎಂದರು
ಕಾರ್ಯಕ್ರಮದ ನಂತರ ರಸಪ್ರಶ್ನೆ ಮಾಡಿ ವಿಜೇತ ಮಕ್ಕಳಿಗೆ ಬಹುಮಾನ ನೀಡಲಾಯಿತು. ಶರಣಬಸವ ಇಂಜಿನಿಯರ್ ಕಾಲೇಜಿನ 30 ವಿದ್ಯಾರ್ಥಿಗಳು ವಿಷಯ ಹಂಚಿಕೊಂಡರು.
ಕಾರ್ಯಕ್ರಮದ ಸಾನಿದ್ಯವನ್ನು ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಿದ್ದರು. ಉಪನ್ಯಾಸಕರಾದ ಜ್ಯೋತಿ ಹರಸೂರ, ಶಿವಲೀಲಾ ಕoಠಿಕಾರ, ಈಶ್ವರಗೌಡ ಪಾಟೀಲ್, ಸಿದ್ದಲಿಂಗ ಬಾಳಿ, ಶಿವಕುಮಾರ ಸರಡಗಿ, ಸುಗುಣ ಕೊಳಕೂರ, ಭುವನೇಶ್ವರಿ ಎಂ. ಉಪಸ್ಥಿತರಿದ್ದರು

ವರದಿ ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ