
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಪಿಡಬ್ಲ್ಯೂಡಿ ಅತಿಥಿಗೃಹದಲ್ಲಿ ಜೆಜೆಎಂ ಪ್ರಗತಿಪರಿಶೀಲನಾ ಸಭೆಯು ಶಾಸಕ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಜರುಗಿತು.
ಸಭೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ನಿಗದಿಗೊಳಿಸಿರುವ ಅವಧಿ ಒಳಗೆ ಪೂರ್ಣಗೊಳಿಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ತಲುಪಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಕಾಡಂಚಿನ ಗ್ರಾಗಳಾದ ದೊಡ್ಡಾನೆ, ತೋಕೆರೆ ಕೊಕ್ಕಬರೆ ಹಾಗೂ ಇನ್ನಿತರ ಕಾಡಂಚಿನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಬಿವೃದ್ಧಿ ಹಾಗೂ ವಿದ್ಯುತ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು, ಪೂರ್ಣಗೊಳ್ಳದ ಕಾಮಗಾರಿಯಗಳ ಮಾಹಿತಿಯನ್ನು ನಮಗೆ ಒದಗಿಸಬೇಕು ಎಂದು ತಾಕೀತು ಮಾಡಿದರು. ಇದೇ ವೇಳೆ 6 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಅಭಾವ ಉಂಟಾಗದಂತೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸಿ ಸಮಸ್ಯೆಯನ್ನು ಬಾರದಂತೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಇದುವರೆಗೆ ಯಾವುದೇ ರೀತಿಯಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾಗಿಲ್ಲ ಇದೇ ನಿಟ್ಟಿನಲ್ಲಿ ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ಇದಲ್ಲದೆ ಡಿಎಚ್ಒ ರವರ ಜೊತೆ ದೂರವಾಣಿ ಮುಖಾಂತರ ಚರ್ಚೆ ನಡೆಸಿದ್ದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಸಂದರ್ಭದಲ್ಲಿ ಜಲಜೀವನ್ ಯೋಜನೆಯ ಎ.ಇಇ ಹರೀಶ್, ಜೆ.ಇ ಮಹೇಶ್ ,ಪೂರ್ಣಿಮಾ,ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್



















