ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಡೆಂಗ್ಯೂ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ:ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ:ಡೆಂಗ್ಯೂ ಜ್ವರ ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತದೆ. ಈ ರೋಗ ಸೊಳ್ಳೆಗಳಿಂದ ಹರಡುವಂಥದ್ದಾಗಿದ್ದು, ಸಾಮಾನ್ಯವಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ನೀರಿನಲ್ಲಿ ಮೊಟ್ಟೆಗಳನ್ನಿಡುವ ಮೂಲಕ ಆಗುತ್ತದೆ. ಹೀಗಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಸಿ ಡಂಗ್ಯೂ ಮುನ್ನೆಚ್ಚರಿಕೆ, ನಿಯಂತ್ರಣ ಕ್ರಮಗಳ ಕುರಿತು ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಡೆಂಗೆ ಜ್ವರಕ್ಕೆ ನಿರ್ದಿಷ್ಟ ಚಿಕಿತ್ಸೆಯಿಲ್ಲ,ಬದಲಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಅನುಸರಿಸಿ ರೋಗದಿಂದ ದೂರ ಉಳಿಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗವು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಸಂಭವ ಇದೆ, ಆದ ಕಾರಣ ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಕಡ್ಡಾಯವಾಗಿ ಬಳಸಬೇಕು ಅಥವಾ ಸೊಳ್ಳೆ ಬತ್ತಿ, ಮುಲಾಮು, ಇತ್ಯಾದಿ ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು ಉತ್ತಮ, ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು, ಸೊಳ್ಳೆಗಳು ಕಚ್ಚದಂತೆ ಮೈತುಂಬಾ ಬಟ್ಟೆಧರಿಸಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಇಲಾಖೆಯ ಮೂಲಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧಿಕಾರಿಗಳಿಗೆ ಡೆಂಗ್ಯೂ ನಿಯಂತ್ರಣ ಕುರಿತು ತರಬೇತಿ ನೀಡಿದೆ ಮತ್ತು ಈಗಾಗಲೇ ಶಾಲಾ ಶಿಕ್ಷಕರಿಗೂ ಸಹ ಡೆಂಗ್ಯೂ ನಿಯಂತ್ರಣ ಕ್ರಮಗಳ ಕುರಿತಂತೆ ತರಬೇತಿಯನ್ನು ನೀಡಲಾಗಿದೆ. ಶಿಕ್ಷಕರು ತಮ್ಮ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಮತ್ತು ಇತರೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ತಿಳಿಸಿ ಅವರ ಮೂಲಕ ಮನೆ ಮನೆಗಳಿಗೆ ಜಾಗೃತಿ ಮೂಡುವಂತೆ ಮಾಡುತ್ತಿದ್ದಾರೆ’ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರು ಶಾಲೆಗಳು ಪ್ರಾರಂಭವಾಗುವ ಮುನ್ನ ಶಾಲೆಗೆ ಭೇಟಿ ನೀಡಿ ಶಾಲೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರವನ್ನು ಶುಚಿಯಾಗಿಡಬೇಕು ಎಲ್ಲಿಯೂ ನೀರು ನಿಲ್ಲದಂತೆ,
ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಾರದ ಹಾಗೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಜ್ವರ ಸಮೀಕ್ಷೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಐ.ಆರ್.ಎಸ್ ಮಾಡಿಸಬೇಕು ಎಂದು ಸೂಚಿಸಿದರು.

ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ, ವಾಂತಿ, ಮೈಮೇಲೆ ಚಿಕ್ಕ ಚಿಕ್ಕ ಗುಳ್ಳೆಯ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

ಡೆಂಗ್ಯೂ ಹೇಗೆ ಹರಡುತ್ತದೆ ?
ಡೆಂಗ್ಯೂ ಜ್ವರ ವೈರಸ್‌ನಿಂದ ಉಂಟಾಗುತ್ತದೆ. ಇದು ಸೋಂಕು ಹೊಂದಿದ ಈಡಿಸ್ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಇದರಿಂದ ಡೆಂಗ್ಯೂ ಹರಡುತ್ತದೆ.

ರೋಗದ ಮುಖ್ಯ ಲಕ್ಷಣಗಳೇನು ?
ಡೆಂಗ್ಯೂ ಜ್ವರ ಬಂದಾಗ ದೇಹದಲ್ಲಿ ಕೆಲವು ಬದಲಾವಣೆ ಕಂಡು ಬರುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳು ಕೆಂಪಾಗುವುದು, ಮೈ-ಕೈಗಳ ಮೇಲೆದದ್ದು ಕಾಣಿಸುವುದು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಈ ರೋಗದ ಪ್ರಮುಖ ಲಕ್ಷಣಗಳೆಂದರೆ ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ನಿಯಂತ್ರಣ ಹೇಗೆ ?:
ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆ ಇಡುತ್ತದೆ. ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರು ಶೇಖರಣೆ ಆಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈಯರ್, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸುವಂತೆ,ಸ್ವಚ್ಛತೆ ಕಾಪಾಡುವಂತೆ ಜನಸಾಮಾನ್ಯರಲ್ಲಿ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಹೇಗೆ ?
ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿ ಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬಹುದು.ಡೆಂಗ್ಯೂ ರೋಗ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಸಮೀಪದ ಆಸ್ಪತ್ರೆ, ನಗರ ಕುಟುಂಬ ಕಲ್ಯಾಣ ಕೇಂದ್ರದಲ್ಲಿ ರಕ್ತ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಡೆಂಗ್ಯೂ ರೋಗ ಕೆಲವೇ ಪ್ರಕರಣದಲ್ಲಿ ತೀವ್ರ ರಕ್ತಸ್ರಾವವಾದಲ್ಲಿ ರಕ್ತದ ಒತ್ತಡ ಕಡಿಮೆ ಆದಲ್ಲಿ ಐವಿ ದ್ರಾವಣ, ಪ್ಲೇಟೆಟ್ ನೀಡಬೇಕಾಗಬಹುದು. ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್, ಡೆಂಗ್ಯೂ ನಿಯಂತ್ರಣ ಜಿಲ್ಲಾ ಸಮನ್ವಯ ಸಮಿತಿ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳಾದ ನಿಯಂತ್ರಣಾಧಿಕಾರಿ ಡಾ.ಸಾಜಿದ್, ನಗರಸಭೆ ಪೌರಾಯುಕ್ತ ಲಕ್ಷ್ಮೀ ಕಾಂತ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ