ತುಮಕೂರು:ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಮತ್ತು ನೋಂದಣಿ ಕಾರ್ಯವನ್ನು ತಾಲೂಕು ಪಂಚಾಯಿತಿ ಮತ್ತು ಸಾಕ್ಷರತಾ ಇಲಾಖೆ/ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 15 ದಿನಗಳ ಕಾಲ ನಡೆಸಲಾಗುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕೆಂದು ತಾಲೂಕು ಪಂಚಾಯಿತಿ ಇ ಒ ಮನವಿ ಮಾಡಿದರು.
ಮಾನ್ಯ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ 6 ರಿಂದ 14 ವರ್ಷದ ವಯೋಮಾನದ ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯುವ ಹಕ್ಕನ್ನು ಹೊಂದಿದ್ದು ಈ ವಯೋಮಾನದ ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಮಾಡಿಸಬೇಕಿದೆ ಎಂದು ತಾಲೂಕು ಪಂಚಾಯಿತಿ ಇ ಓ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಕೊಟ್ಟ ಕರಿಯಣ್ಣ