ಪಾವಗಡ:ಶಾಲೆ ಬಿಟ್ಟ ಮಕ್ಕಳ ಬಗ್ಗೆ ಶೀಘ್ರದಲ್ಲೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಜು.15 ರಿಂದ 31ವರೆಗೂ 6 ರಿಂದ 18 ವರ್ಷದವರೆಗೆ ಶಾಲೆಯಿಂದ ಹೊರಗೆ ಇರುವ ಮಕ್ಕಳ OSA ಸಮೀಕ್ಷೇ ಮಾಡಲಿದ್ದೇವೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಾನಕೀರಾಮ್ ಹೇಳಿದರು.
ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಿನ್ನೆ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕರ ಅಧ್ಯಕ್ಷತೆಯಲ್ಲಿ ತಾಲೂಕಿನಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಸಮೀಕ್ಷೆ ಮಾಡಿ ಶಾಲೆಗೆ ಮರುದಾಖಲೀಕರಣ ಮಾಡುವ ಕುರಿತು Brc crp& Brp ಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ನಂತರ ಮಾತನಾಡಿದ ಅವರು ನಾವು ಗ್ರಾಮೀಣಾಭಿವೃಧ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಶಾಲೆಯಿಂದ ಹೊರಗಿರುವ ಮಕ್ಕಳ ಸಮೀಕ್ಷೆ ನಡೆಸಲಿದ್ದು.ಈ ವೇಳೆ ಮಕ್ಕಳು ಪತ್ತೆಯಾದಲ್ಲಿ ಆ ಭಾಗದ ಬಿಆರ್ ಸಿ,ಸಿಆರ್ ಪಿ ಮತ್ತು ಮುಖ್ಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಶಿಕ್ಷಕರು ಸಕಾಲಕ್ಕೆ ಶಾಲೆಗೆ ಹಾಜರಾಗಿ ಶಾಲೆಯಲ್ಲಿ ಪಾಠ ಪ್ರವಚನಕ್ಕೆ ಆದ್ಯತೆ ನೀಡಬೇಕು. ಮುಂದಿನ ದಿಗಳಲ್ಲಿ ಈ ಬಗ್ಗೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮರವರು ಮಾತನಾಡಿ ಶಾಲೆ ಬಿಟ್ಟ ಮಕ್ಕಳ ಮರು ದಾಖಲೀಕರಣ ಮಾಡಲು ನಾವು ಈಗಾಗಲೇ ತಳಮಟ್ಟದಲ್ಲಿ ನೋಡಲ್ ಅಧಿಕಾರಿಗಳು ಮತ್ತು ಸಿಆರ್ ಪಿ ಮನೆ ಮನೆ ಭೇಟಿ ಮಾಡುವ ಮೂಲಕ ಶಾಲೆಯಿಂದ ಹೊರಗಿರುವ ಮಕ್ಕಳನ್ನು ಶಾಲೆಗೆ ಕರೆ ತರಲು ವಿವಿಧ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ವೇಳೆ ಅಕ್ಷರ ದಾಸೋಹ AD ಶಂಕರಪ್ಪ ರವರು,
ಬಿ ಆರ್ ಸಿ ವೆಂಕಟೇಶ್ ಎಲ್ಲ BRC, CRP ರವರು ಇದ್ದರು. ತಾಲ್ಲೂಕಿನ ಎಲ್ಲ ಬಿಆರ್ ಸಿ ಹಾಗೂ ಸಿಆರ್ ಪಿ ರವರು ಸಭೆಯಲ್ಲಿ ಭಾಗವಹಿಸಿದ್ದರು.