ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಸ್.ಆರ್.ಪಾಟೀಲರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

ಬಾಗಲಕೋಟೆ:ಜಿಲ್ಲಾ ೧೧ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೆನಪಿನಕಾಣಿಕೆ ಹಾಗೂ ಬ್ಯಾಗುಗಳ ಕೊಡುಗೆ ನೀಡಿದ್ದ ಜಿಲ್ಲೆಯ ಮತ್ತು ಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿಗಳಾದ ಸಹಕಾರಿ ಧುರೀಣ,ಮಾಜಿ ಸಚಿವರಾದ ತಮ್ಮ ಹುಟ್ಟೂರಾದ ಬಾಡಗಂಡಿಗೆ ನೂತನ ಮೆಡಿಕಲ್ ಕಾಲೇಜು ತಂದ ರೂವಾರಿ ಎಸ್.ಆರ್.ಪಾಟೀಲ ಬಾಗಲಕೋಟೆ ಜಿಲ್ಲಾ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಬಾಗಲಕೋಟೆಯ ನವನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ಅವರನ್ನು 16.07.2024 ರಂದು
ಮಂಗಳವಾರದಂದು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ,ಬಾಗಲಕೋಟೆ ತಾಲೂಕ ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಬೀಳ್ಗಿಯ ಸಾಹಿತಿ ಹಾಗೂ ಪತ್ರಕರ್ತ ಕಿರಣ್ ಬಾಳಗೋಳ,ಕ.ಸಾ.ಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ್ ಕಾಳನ್ನವರ,ಹಿರಿಯ ಸಾಹಿತಿ ಡಾ.ಪ್ರಕಾಶ್ ಖಾಡೆ,ತಾಲೂಕಾ ಮಹಿಳಾ ಪದಾಧಿಕಾರಿಗಳಾದ ಸುಶೀಲಾ ಅಣ್ಣಿಗೇರಿ,ಡಾ.ಮಹೇಶ್ವರಿ ಕೋಟಿ,ಹಿರಿಯರಾದ ಕೃಷ್ಣಾ ಯಡಹಳ್ಳಿ,ಸಿದ್ದಣ್ಣ ಮಳ್ಳಿಗೇರಿ,ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಸಿ.ಎನ್. ಬಾಳಕ್ಕನವರ,ಮಲ್ಲಿಕಾರ್ಜುನ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ