ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೀಕ್ಷಾ ರಂಜಿತ ಮಹೋತ್ಸವ ಕಾರ್ಯಕ್ರಮ ನಿಮಿತ್ತ ಪೂರ್ವ ಭಾವಿ ಸಭೆ

ಪಾವಗಡ :ಶನಿವಾರ 20ನೇ ತಾರೀಖು ಚಿತ್ರದುರ್ಗದಲ್ಲಿ ದೀಕ್ಷಾ ರಂಜಿತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮಕ್ಕೆ ಪಾವಗಡ ತಾಲ್ಲೂಕಿನಿಂದ ಭೋವಿ ಕುಲಬಾಂಧವರು ಹೆಚ್ಚಿನ ಸಂಖ್ಯೆ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಾಲ್ಲೂಕು ಭೋವಿ ಸಂಘದ ಅಧ್ಯಕ್ಷ ಬಂಗಾರಪ್ಪ ತಿಳಿಸಿದ್ದಾರೆ.
ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರುವ ಶನಿವಾರ 20 ನೇ ತಾರೀಖು ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಬೋವಿ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಂಜಿತ ಮಹೋತ್ಸವ ಈ ಮಹೋತ್ಸವಕ್ಕೆ ತಾಲ್ಲೂಕಿನ ಭೋವಿ ಜನಾಂಗದವರು ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಾಲೂಕಿನ ಜನತೆಯಲ್ಲಿ ಮನವಿ ಮಾಡಿಕೊಂಡರು.

ಕಾರ್ಯಕ್ರಮಕ್ಕೆ ಬರುವಂತಹವರಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸಿದ್ದು ಹೋಬಳಿ ವ್ಯಾಪ್ತಿಯ ಮುಖಂಡರುಗಳಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಸಮಯಕ್ಕೆ ಸರಿಯಾಗಿ ಬಂದು ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಭೋವಿ ಸಂಘದ ತಾಲ್ಲೂಕು ಅಧ್ಯಕ್ಷ ಬಂಗಾರಪ್ಪ,ಶ್ರೀರಾಮುಲು,ನಿವೃತ್ತ ಶಿಕ್ಷಕ ಹನುಮಂತರಾಯಪ್ಪ,ಜಿ ವಿ ವೆಂಕಟೇಶ್, ದಂಡಪಾಳ್ಯ ವೆಂಕಟೇಶ್ ,ವಡ್ಡೇ ಶ್ರೀನಿವಾಸಲು,ಬೊಟ್ಟುವೆಂಕಟೇಶಲು,ಶಿವಮೂರ್ತಿ,
ಸುಜಿತ್,ಸಿದ್ದಾಪುರ ಗ್ರಾಪಂ ಸದಸ್ಯ ರಮೇಶ್,ಶಿವ, ಅಂಜಿ ಸೇರಿದಂತೆ ತಾಲೂಕಿನ ಎಲ್ಲಾ ಮುಖಂಡರುಗಳು,ಸಮಾಜದವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ