ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾರ್ಗಿಲ್ ವಿಜಯ: 12 ಗಂಟೆಗಳ ಲೈವ್

ಶಿವಮೊಗ್ಗ: ಕಾರ್ಗಿಲ್ ವಿಜಯೋತ್ಸವಕ್ಕೆ ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಯೇ ದಿಲ್ ಮಾಂಗೇ ಮೋರ್ ರೂಪಿಸಿದೆ.
ಜುಲೈ 21ರ ಭಾನುವಾರ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ 12 ತಾಸುಗಳ ನೇರಪ್ರಸಾರದ ಕಾರ್ಯಕ್ರಮ ಇದಾಗಿರುತ್ತದೆ. ಯೇ ದಿಲ್ ಮಾಂಗೇ ಮೋರ್ ಶೀರ್ಷಿಕೆಯ ಈ ನೇರಪ್ರಸಾರವನ್ನು ಚೇತನ್ ಸಿ ರಾಯನಹಳ್ಳಿ ಹಾಗೂ ಕೆ.ವಿ. ಅಜೇಯ ಸಿಂಹ ನಡೆಸಿಕೊಡಲಿದ್ದಾರೆ. ಇದರಲ್ಲಿ ಭಾರತೀಯ ಸೇನೆ, ಕಾರ್ಗಿಲ್ ಯುದ್ಧ, ಯುದ್ಧ ನೀತಿಗಳು, ವೀರಯೋಧರ ಕುರಿತಾಗಿ ಮಾತುಗಳು, ವೀರ ಯೋಧರೊಂದಿಗೆ ಸಂವಾದ ಹಾಗೂ ದೇಶಭಕ್ತಿ ಗೀತೆಗಳು, ಚಲನಚಿತ್ರದ ಹಾಡುಗಳು ಇರುತ್ತವೆ. ಈ ಕಾರ್ಯಕ್ರಮಕ್ಕೆ ತಾವೂ ಕರೆ ಮಾಡಿ ಮಾತನಾಡಬಹುದು.ತಾವು (ಮೊ: 96 860 96 279)ಗೆ ಕರೆ ಮಾಡಬಹುದು.
ರೇಡಿಯೋ ಶಿವಮೊಗ್ಗ ಆಪ್ ಪ್ಲೇ ಸ್ಟೋರ್ ಹಾಗೂ ಆಪಲ್ ಸ್ಟೋರ್ ಗಳಲ್ಲಿ ಲಭ್ಯವಿದ್ದು, ಇದನ್ನು ಡೌನ್ ಲೋಡ್ ಮಾಡಿಕೊಂಡು ದಿನದ 24 ಗಂಟೆಯೂ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳನ್ನು ಆಲಿಸಬಹುದೆಂದು ನಿಲಯ ನಿರ್ದೇಶಕ ಜಿ.ಎಲ್.ಜನಾರ್ದನ್ ಕೋರಿರುತ್ತಾರೆ.

ವೆಂಡಿ: ಕೊಡಕ್ಕಲ್ ಶಿವಪ್ರಸಾದ್. ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ