ಕಲಬುರಗಿ: ಕೆಲ ಉದ್ಯಮಿಗಳ ಆಕ್ಷೇಪಕ್ಕೆ ಮಣಿದು ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆಯನ್ನು ಅಧಿವೇಶನದಲ್ಲಿ ಮಂಡಿಸದಿರುವ ರಾಜ್ಯ ಸರಕಾರದ ನಿಲುವನ್ನು ಖಂಡಿಸಿರುವ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅಸಮಾಧನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು,ರಾಜ್ಯ ಸರಕಾರ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ಒಳ್ಳೆಯ ನಿರ್ಧಾರವನ್ನೇ ಕೈಗೊಂಡಿತ್ತು.ಆದರೆ ಯಾವುದೋ ಹಿತಾಸಕ್ತಿಗೆ ಮಣಿದು ರಾತ್ರೋ ರಾತ್ರಿ ನಿರ್ಧಾರ ಮರು ಪರಿಶೀಲಿಸುತ್ತೇವೆ ಎಂಬುದು ಸಮಂಜಸವಲ್ಲ.ಆರಂಭದಲ್ಲಿ ರಾಜ್ಯದ ಖಾಸಗಿ ಉದ್ದಿಮೆಗಳ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ನೀಡುವ ಮಸೂದೆಗೆ ಒಪ್ಪಗೆ ನೀಡಿರುವ ಕುರಿತು ಸಿದ್ದರಾಮಯ್ಯನವರು ತಮ್ಮ ಅಧಿಕೃತ ಎಕ್ಸ್ ಖಾತೆಗಳಲ್ಲೂ ಘೋಷಣೆ ಮಾಡಿದ್ದರು.ಆದರೆ ಕೆಲ ಸಮಯದಲ್ಲಿ ಪೋಸ್ಟ ಡೀಲಿಟ್ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದಿದ್ಯಾಕೆ? ತಡೆ ಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ? ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇನೆ ಎಂದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.