ಬೆಂಗಳೂರು:ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ಇಂದಿನ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ , ಸರ್ಕಾರದ ಹುದ್ದೆಗಳು ಮಾರಾಟಕ್ಕಿವೆ ಎಂದು ರೇಟ್ ಕಾರ್ಡುಗಳನ್ನು ಪ್ರದರ್ಶಿಸಿ,SC/ST ಸಮುದಾಯದ ಹಣ ದುರುಪಯೋಗ ಹಾಗೂ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ರವರು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಶಾಸಕರಾದ ಮಾನ್ಯ ಸಿ.ಟಿ.ರವಿ ರವರು, ಎನ್.ರವಿಕುಮಾರ್ ರವರು, ಬಿಜೆಪಿ ಹಾಗೂ ಜೆಡಿಎಸ್ ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ