ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ಯಾರಂಟಿ ಸಮಿತಿ ಬಸವರಾಜ್ ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :ಹತ್ತು ದಿಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಎರಡು ತಿಂಗಳುಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ.ಕೂಡಲೇ ಹಣ ಬಿಡುಗಡೆ ಮಾಡಿ ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಸದಸ್ಯರಾದ ಎಸ್.ಬಸವರಾಜ್ ವಿಧಾನಸಭೆಯಲ್ಲಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಗಮನಕ್ಕೆ ತಂದಾಗ, ಅವರು ಮುಂದಿನ‌ ಹತ್ತು ದಿನಗಳಲ್ಲಿ ಎರಡು ತಿಂಗಳ ಗೃಹಲಕ್ಷ್ಮೀ ಹಣ ಒಟ್ಟಿಗೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.

ಫಲಾನುಭವಿಗಳು ಗೃಹಲಕ್ಷ್ಮೀ ಹಣ ತಲುಪದೇ ತೊಂದರೆಯಲ್ಲಿದ್ದಾರೆ ಅವರನ್ನು ಭೇಟಿ ಮಾಡಿದಾಗ ತೀವ್ರ ತೊಂದರೆಗಳನ್ನು ಹೇಳಿಕೊಳ್ಳುತ್ತಿದ್ದಾರೆ ಎಂದು ಸದಸ್ಯ ಬಸವರಾಜ್ ವಿಧಾನಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಮನ ಸೆಳೆದರು.
ಇದಕ್ಕೆ ಸ್ಪಂದಿಸಿದ ಸಚಿವೆ ಹೆಬ್ಬಾಳ್ಕರ್ ರವರು, ಹತ್ತು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು. ಸರ್ವರ್ ಸಮಸ್ಯೆ ಇದ್ದುದರಿಂದ ಮಹಿಳೆಯರಿಗೆ ಸೂಕ್ತ ಸಮಯದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಈಗ ಹಣ ಬಿಡುಗಡೆ ಮಾಡಲು ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡಿದ್ದಾರೆಂದು ಬಸವರಾಜ್ ತಿಳಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ