ಬೆಂಗಳೂರು:ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಅಂತ ಹೇಳಿದೆ. ಆದರೆ ತೃಪ್ತಿ ಇಲ್ಲ. ಎಲ್ಲಾ ನಿಗಮಗಳಿಂದಲೂ ಸರ್ಕಾರ ಅನುದಾನ ವಾಪಸ್ ಪಡೆದಿದೆ. ಫಲಾನುಭವಿಗಳಿಗಳ ಕತೆ ಏನು? ದರ್ಶನ್ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕೆಲಸ ಮಾಡಿತು. ಆದರೆ ವಾಲ್ಮೀಕಿ ನಿಗಮದಲ್ಲಿ ನಿಧಾನ ಏಕೆ? ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯ್ಕ ಅವರು ವಿಧಾನಸಭೆಯಲ್ಲಿ ಒತ್ತಾಯಿಸಿದರು.
ಈ ಕುರಿತು ನಾನು ವಿಧಾನ ಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದೂ ಅವರು ಹೇಳಿಕೊಂಡಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ