ಕಲಬುರಗಿ:ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್ ಇದಾಗಿದೆ. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಎಂದು ಅವರು ಹೇಳಿದರು.
ಈ ಕುರಿತು ಪ್ರಕಟಣೆ ನೀಡಿದ ಅವರು,ಬೆಂಗಳೂರು – ಚೆನ್ನೈ, ಹೈದರಾಬಾದ್-ಬೆಂಗಳೂರು, ಬೆಂಗಳೂರು ಸೇರಿ ಒಟ್ಟು 12 ಕೈಗಾರಿಕಾ ಕಾರಿಡಾರ್ ಗಳನ್ನು ಘೋಷಣೆ ಮಾಡುವುದು ಉದ್ಯೋಗ, ಆರ್ಥಿಕ ವೃದ್ಧಿಗೆ ಬೃಹತ್ ಕೊಡುಗೆ ನೀಡಲಿದೆ.ಹೆಚ್ಚುತ್ತಿರುವ ಆಹಾರ ಬೇಡಿಕೆಯ ಪೂರೈಕೆ ಹಾಗೂ ಕೃಷಿಗೆ ಮತ್ತಷ್ಟು ಚೈತನ್ಯ ತುಂಬಲು ಕೃಷಿ ಸಂಶೋಧನೆ & ಅಭಿವೃದ್ಧಿಗೆ ಬಿಜೆಟ್ ಆದ್ಯತೆ ಕೊಟ್ಟಿದೆ. ಕೃಷಿ ಬೆಳೆಯ ಡಿಜಿಟಲ್ ಸಮೀಕ್ಷೆ ಮಾಡುವ ಯೋಜನೆಯನ್ನು ದೇಶದ 400 ಜಿಲ್ಲೆಗಳಿಗೆ ವಿಸ್ತರಿಸುವುದು ಸ್ವಾಗತಾರ್ಹವಾಗಿದೆ. ಮೇಲಾಗಿ ಸಹಜ ಕೃಷಿಗೆ ವಿತ್ತ ಸಚಿವರು ಪ್ರಾಮುಖ್ಯತೆ ನೀಡಿದ್ದಾರೆ.
ಬಜೆಟ್ ನಲ್ಲಿ ಕೃಷಿ ವಲಯಕ್ಕೆ 1.5 ಲಕ್ಷ ಕೋಟಿ ಉದ್ಯೋಗ,ಕೌಶಾಲ್ಯಭಿವೃದ್ಧಿಗೆ 1.5 ಲಕ್ಷ ಕೋಟಿ,ಮುದ್ರಾ ಯೋಜನೆಯಲ್ಲಿ ಸಾಲ ನೀಡುವ ಪ್ರಮಾಣವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಿರುವುದು, ಗ್ರಾಮೀಣಾಭಿವೃದ್ಧಿ ಅಭಿವೃದ್ಧಿಗೆ 1 ಲಕ್ಷ ಕೋಟಿ,ಬಡವರಿಗೆ 3 ಕೋಟಿ ಮನೆ ಕೊಡುವುದು,ಕೃಷಿ ವಲಯಕ್ಕೆ ಬಹಳ ಒತ್ತು ಕೊಟ್ಟಿದ್ದು,ಕೃಷಿ ಉತ್ಪಾದನೆ ಹೆಚ್ಚಳ ಮತ್ತು ಸಂಸ್ಕರಣೆಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.ಸಾಮಾನ್ಯ ಜನರ ತೆರಿಗೆ ಕಡಿಮೆ ಮಾಡಿದ್ದು, ಮೂರು ಲಕ್ಷದವರೆಗೂ ಯಾವುದೇ ತೆರಿಗೆಯಿಲ್ಲ. ಮೂರು ಲಕ್ಷದಿಂದ 7 ಲಕ್ಷದವರೆಗೆ ಶೇ 5% ರಷ್ಟು ತೆರಿಗೆ ವಿಧಿಸಿ ತೆರಿಗೆ ಕಡಿಮೆ ಮಾಡಿದ್ದಾರೆ. ಇದರಿಂದ ಮಧ್ಯಮ ವರ್ಗದ ಜನರಿಗೆ ಬಹಳ ಅನುಕೂಲವಾಗಲಿದೆ.
ಸಂಶೋಧನೆ,ಆವಿಷ್ಕಾರಕ್ಕೆ ಬಜೆಟ್ ಅತಿಹೆಚ್ಚು ಒತ್ತು ಕೊಟ್ಟಿದ್ದು,ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಸ್ಪರ ಸಹಯೋಗದಿಂದ ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡುವುದು ಅಭಿವೃದ್ಧಿಗೆ ದೂರಗಾಮಿ ಕೊಡುಗೆ ನೀಡುವ ಉಪಕ್ರಮವಾಗಿದೆ ಎಂದರು. ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎಂದು ಅವರು ಹೇಳಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.