ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಪಟ್ತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸಿಗೆ ಕ್ರಮ:ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ.ಸಿ ನಾರಾಯಣಸ್ವಾಮಿ

ಯಾದಗಿರಿ:ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ರಾಜ್ಯ ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ.ಸಿ ನಾರಾಯಣಸ್ವಾಮಿ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಐದನೇ ಹಣಕಾಸು ಆಯೋಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ಧಿಯಲ್ಲಿ ವಿವಿಧ ಇಲಾಖೆಗಳ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ವಿಶೇಷವಾಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನುದಾನ ಸಮರ್ಪಕವಾಗಿ ಬಳಕೆ, ವಿವಿಧ ಇಲಾಖೆಗಳ ವ್ಯಾಪ್ತಿಯ ರಾಜ್ಯ ಮತ್ತು ಜಿಲ್ಲಾ ವಲಯ ಯೋಜನೆಗಳ ಅಡಿಯ ಅನುದಾನ ಸದ್ಬಳಕೆ, ಸೇರಿದಂತೆ ಗ್ರಾಮ ಸ್ವರಾಜ್ಯ ಕಾಯಿದೆಯ ಉಲ್ಲಂಘನೆ ಯಾಗದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯಬೇಕು. ಅನುದಾನ ಹಂಚಿಕೆಯಲ್ಲಿ ಸಮಸ್ಯೆಗಳು, ಕೊರತೆಗಳು, ಬೇಡಿಕೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಜಿಲ್ಲಾ ವಲಯ ಯೋಜನೆಗಳ ಅನುದಾನ, ರಾಜ್ಯ ವಲಯ ಯೋಜನೆಗಳಿಗೆ ಹಸ್ತಾಂತರವಾಗಿರುವ ಬಗ್ಗೆಯೂ ಅಧ್ಯಯನ ಮತ್ತು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಆಡಳಿತ ಸುಧಾರಣೆ ಮತ್ತು ಹಣಕಾಸು ಸುಧಾರಣೆಗಾಗಿ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದ್ದು, ಲಭ್ಯವಿರುವ ಅನುದಾನವನ್ನು ಸಹ ಸಂಬಂಧಿಸಿದ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಅವರು ಸಲಹೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಿವಿಧ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗುವ ಅನುದಾನ ಮತ್ತು ಸಂಪನ್ಮೂಲಗಳ ಕ್ರೋಢೀಕರಣ ಹಾಗೂ ಬಳಕೆ ಅತ್ಯಂತ ಮುಖ್ಯವಾಗಿದ್ದು, ವಿವಿಧ ಕುಂದುಕೊರತೆಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಆಯೋಗದ ಅಧ್ಯಕ್ಷರು ಸಭೆಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್ ಅವರು ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿ ಬಾಹ್ಯ ಮೂಲಗಳಿಂದ ಪಡೆದ ಸಿಬ್ಬಂದಿಗಳಿಗೆ ಸಮರ್ಪಕ ಅನುದಾನ ಲಭ್ಯವಾಗುತ್ತಿಲ್ಲ. ಅದರಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಾಲು ಉತ್ಪಾದನೆಗೆ ಉತ್ತೇಜನ ನೀಡಲು ಅನುಕೂಲವಾಗುವಂತೆ ಪಶು ಸಂಗೋಪನ ಇಲಾಖೆ ವ್ಯಾಪ್ತಿಯಲ್ಲಿ ಔಷಧಿಗಳ ಮತ್ತು ಇತರೆ ನೆರವು ನೀಡುವ ಅವಶ್ಯಕತೆ ಇದೆ. ಅದರಂತೆ ಆರೋಗ್ಯ ಇಲಾಖೆ ಮತ್ತು ವಿವಿಧ ಶಾಲೆಗಳ ವ್ಯಾಪ್ತಿಯಲ್ಲಿ ಅಡುಗೆ ಕೋಣೆಗಳಿಗೆ ಆಯಮ್ಮ ನೇಮಕಾತಿ ಸಮಸ್ಯೆಗಳ,ಜಿ.ಪಂ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಆಯೋಗದ ಗಮನಕ್ಕೆ ತಂದರು. ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ಆರ್.ಎಸ್‌ಕೊಂಡವೆ, ಸಮಾಲೋಚಕರಾದ ಕೆಂಪೇಗೌಡ, ಅಧ್ಯಕ್ಷರ ಆಪ್ತ ಸಹಾಯಕ ಯಾಲಕ್ಕಿಗೌಡ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ